ಶುಕ್ರವಾರ, ಮೇ 14, 2021
35 °C

ಹೈಕೋರ್ಟ್ ನಿಯಮಾವಳಿ: ಸುಪ್ರೀಂನಲ್ಲಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚಿಸಿರುವ ನಿಯಮಾವಳಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸ್ಪಷ್ಟನೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.ಗೃಹ ಕಚೇರಿ `ಕೃಷ್ಣಾ~ದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟನೆ ದೊರೆತ ನಂತರವೇ ನೂತನ ಉಪ ಲೋಕಾಯುಕ್ತರ ನೇಮಕ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದರು.ಪ್ರಧಾನಿ ಇದೇ 16ರಂದು ಆಯೋಜಿಸಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ, ಬರಪೀಡಿತ ಪ್ರದೇಶಗಳಲ್ಲಿ ಅಂದು ಪ್ರವಾಸ ಕೈಗೊಳ್ಳುತ್ತಿಲ್ಲ. ಆದರೆ 17 ಮತ್ತು 18ರಂದು ವಿಜಾಪುರ, ಬೀದರ ಅಥವಾ ಗುಲ್ಬರ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ತಿಳಿಸಿದರು.ಜನರ ಸಮಸ್ಯೆಗಳಿಗೆ ಸ್ಪಂದಿಸಬಲ್ಲ, ಟೀಕೆ-ಟಿಪ್ಪಣಿಗಳನ್ನು ಸಲಹೆಯ ರೂಪದಲ್ಲಿ ಸ್ವೀಕರಿಸಬಲ್ಲ ವ್ಯಕ್ತಿಯೊಬ್ಬರನ್ನು ಬೆಂಗಳೂರು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು  ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.ಕಾವೇರಿ ವಿವಾದ, ಬರ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಲು ಇದೇ 19ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅನಂತರ ನವದೆಹಲಿಗೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಲಾಗುವುದು ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಶಂಕರ ಬಿದರಿ ಅವರನ್ನು ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ರಾಜ್ಯ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.