ಶುಕ್ರವಾರ, ಜೂನ್ 18, 2021
26 °C

ಹೈ.ಕ ಪ್ರದೇಶದಲ್ಲಿ ಕಾಂಗ್ರೆಸ್ ದೂಳೀಪಟ: ಶಿವಾನಂದ ಕಲ್ಲೂರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ‘ಏಪ್ರಿಲ್ 17ರಂದು ನಡೆ­ಯುವ ಲೋಕಸಭಾ ಚುನಾ­ವಣೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್‌ ದೂಳಿ ಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶಿವಾ­­ನಂದ ಕಲ್ಲೂರ್ ಹೇಳಿದರು.ಅವರು, ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.’ಈಗಾಗಲೇ ರಾಜ್ಯದ 28 ಲೋಕ­ಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ದೇಶದ ಸಮರ್ಥ ನಾಯಕ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ರಾಜ್ಯದ ಮತದಾರರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ ಎದ್ದು ಕಾಣುತ್ತಿದೆ’ ಎಂದು ಅವರು ಹೇಳಿದರು.’ಕಳೆದ ಒಂದು ತಿಂಗಳಲ್ಲಿ ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ವಿಜಾ­ಪುರ, ಗುಲ್ಬರ್ಗ, ಬೀದರ್, ರಾಯಚೂರ, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳಲ್ಲಿ ಸಂಚರಿಸಿದ್ದೇನೆ. ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿ­ಪ್ರಾಯ ಸಂಗ್ರಹಿಸಿದ್ದೇನೆ. ಹೈದರಾ­ಬಾದ ಕರ್ನಾಟಕ ಹಾಗೂ ಮುಂಬಯಿ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಭರವಸೆ ಮೂಡಿದೆ’ ಎಂದಿ­ದ್ದಾರೆ. ‘ಮೋದಿ ಅವರನ್ನು ಪ್ರಧಾನಿ­ಯನ್ನಾಗಿ ಮಾಡಲು ದೇಶದ ಜನತೆ ನಿರ್ಧ­ರಿಸಿದ್ದು, ಯಾವ ಶಕ್ತಿಗಳು ಅವ­ರನ್ನು ತಡೆಯಲು ಸಾಧ್ಯವಿಲ್ಲ. ದೇಶ ಭಕ್ತಿ ಇದ್ದವರು ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಅವ­ರನ್ನು ಬೆಂಬಲಿಸಲಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಧಿ­ಕಾರಕ್ಕೆ ಬಂದರೆ ದೇಶ ಮತ್ತಷ್ಟು ಬಲಿಷ್ಠ­ಗೊಳ್ಳಲಿದೆ’ ಎಂದರು.ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಅಶೋಕ ಅಲ್ಲಾಪುರ, ರಮೇಶಬಾಬು ವಕೀಲ್‌, ಬಸವರಾಜ ಪಾಟೀಲ್ ನರಿಬೋಳ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.