`ಹೈಟೆಕ್ ಆಸ್ಪತ್ರೆ ಅವಶ್ಯ

ಬುಧವಾರ, ಜೂಲೈ 17, 2019
23 °C

`ಹೈಟೆಕ್ ಆಸ್ಪತ್ರೆ ಅವಶ್ಯ

Published:
Updated:

ಆನೇಕಲ್:  `ಗ್ರಾಮಾಂತರ ಪ್ರದೇಶಗಳಲ್ಲಿ ಹೈಟೆಕ್ ಆಸ್ಪತ್ರೆಗಳ ಅವಶ್ಯಕತೆಯಿದೆ' ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ನುಡಿದರು.ತಾಲ್ಲೂಕಿನ ಜಿಗಣಿಯಲ್ಲಿ ವಿಜಯಶ್ರೀ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಇತ್ತೀಚಿನ ದಿನಗಳಲ್ಲಿ ಜನರು ಅನೇಕ ಒತ್ತಡಗಳಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆತರೆ ಬಹಳ ಬೇಗ ಗುಣಮುಖರಾಗುತ್ತಾರೆ. ಹಾಗಾಗಿ ಉನ್ನತ ತಂತ್ರಜ್ಞಾನವಿರುವ ಆಸ್ಪತ್ರೆಗಳ ಅವಶ್ಯಕತೆಯಿದೆ' ಎಂದರು. ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಆಸ್ಪತ್ರೆಯನ್ನು ಉದ್ಘಾಟಿಸಿದರು.ಶಾಸಕ ಬಿ.ಶಿವಣ್ಣ, ವಿಧಾನ ಪರಿಷತ್ ಸದಸ್ಯೆ ತಾರಾ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಮಚಂದ್ರ, ಬಮುಲ್ ನಿರ್ದೇಶಕ ಆರ್.ಕೆ.ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್.ಬಸವರಾಜು, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಅಚ್ಯುತರಾಜು, ಭೂನ್ಯಾಯ ಮಂಡಳಿ ಸದಸ್ಯ ಜಿ.ಆರ್.ದಿನೇಶ್, ಕಾಂಗ್ರೆಸ್ ಮುಖಂಡರಾದ ಕೆ.ಎಸ್.ನಟರಾಜ್, ಜಿಗಣಿ ಕೃಷ್ಣಪ್ಪ, ಸಂಪಂಗಿಸ್ವಾಮಿ, ರಾಮೋಜಿ ಗೌಡ, ಹಾ.ವೇ.ವೆಂಕಟೇಶ್, ಸಂಸ್ಥೆಯ ನಿರ್ದೇಶಕರಾದ ಡಾ.ವಿಜಯ್,ಬಿ.ನಾಗರಾಜು, ಎನ್.ಶೇಖರ್ ಮತ್ತಿತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry