ಹೈದರಾಬಾದ್‌ಗೆ ಕುಕ್ ಪಡೆ

7

ಹೈದರಾಬಾದ್‌ಗೆ ಕುಕ್ ಪಡೆ

Published:
Updated:

ಹೈದರಾಬಾದ್ (ಪಿಟಿಐ): ಏಕದಿನ ಕ್ರಿಕೆಟ್ ಸರಣಿಯನ್ನಾಡಲು ಅಲಿಸ್ಟರ್ ಕುಕ್ ನೇತೃತ್ವದ ಇಂಗ್ಲೆಂಡ್ ತಂಡ ಮಂಗಳವಾರ ಇಲ್ಲಿಗೆ ಆಗಮಿಸಿತು. ಪ್ರವಾಸಿ ತಂಡ ಆತಿಥೇಯ ಭಾರತದ ವಿರುದ್ಧ ಐದು ಏಕದಿನ ಹಾಗೂ ಒಂದು ಟ್ವೆಂಟಿ-20 ಪಂದ್ಯವನ್ನಾಡಲಿದೆ.ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸಿದ ಆಟಗಾರರು ನೇರವಾಗಿ ನಗರದಲ್ಲಿನ ಹೋಟೆಲ್‌ಗೆ ತೆರಳಿದರು. ಆದ್ದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.ಈ ಆಟಗಾರರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry