ಸೋಮವಾರ, ಜೂನ್ 14, 2021
26 °C

ಹೈನುಗಾರಿಕೆ ಸ್ವಾವಲಂಬನೆಯ ಪ್ರತೀಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದ ಜನತೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಪಿ.ನಾಗರಾಜು ಅಭಿಪ್ರಾಯಪಟ್ಟರು.ಬಿಡದಿ ಹೋಬಳಿ ಸಂಜೀವಯ್ಯನದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಹಳ್ಳಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದೆ. ಇದು ರೈತರ ಗ್ರಾಮೀಣ ಭಾಗದ ಜನರ ಬದುಕನ್ನು ಸುಭದ್ರಗೊಳಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಪಿ. ಪ್ರಕಾಶ್ ಮಾತನಾಡಿದರು.ರಾಮನಗರ ಶಿಬಿರದ ಉಪ ವ್ಯವಸ್ಥಾಪಕ ಮಾಯಣ್ಣ, ವಿಸ್ತರಣಾಧಿಕಾರಿಗಳಾದ ಕೆ.ಎಂ ನಂಜಯ್ಯ, ರಮೇಶ್, ಮುಖಂಡ ಹೊನ್ನಶೆಟ್ಟಿ, ನಿರ್ದೇಶಕರಾದ ಮಹೇಶ್, ರಾಘವೇಂಧ್ರ, ಕೆ. ವೇಣುಗೋಪಾಲ್, ಕೃಷ್ಣಪ್ಪ., ವೇಣುಗೋಪಾಲ್, ಬಾಬುರೆಡ್ಡಿ, ರಾಜಮ್ಮ, ಆಂಜನಪ್ಪ, ಕಾರ್ಯದರ್ಶಿ ಲಕ್ಷ್ಮಿ ಶ್ರೀನಿವಾಸ್ ಮುಂತಾದವರು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.