ರಾಯಚೂರು: ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹಸರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೋಟಿ ವೃಕ್ಷ ಆಂದೋಲನದಲ್ಲಿ ಈ ಭಾಗದ ಪ್ರತಿ ಜಿಲ್ಲೆಗಳಲ್ಲಿ 25 ಲಕ್ಷ ಸಸಿಗಳನ್ನು ಬೆಳೆಸಲು ಆದೇಶಿಸಲಾಗಿದೆ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಗೆ (ಸಿಎಸ್ಆರ್) ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡುವುದರ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಅರಣ್ಯ ಇಲಾಖೆಗಳ ಸಹಯೋಗದಲ್ಲಿ ನರೇಗಾ ಅಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ರಿಂದ 5 ಸಾವಿರ ಸಸಿಗಳನ್ನು ಬೆಳಸುವುದಕ್ಕೆ ಇಲಾಖೆ ಸಹಕರಿಸಲಿದೆ ಎಂದರು.

ನಗರಪ್ರದೇಶಗಳಲ್ಲಿ ಅರಣ್ಯ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್) ಹಾಗೂ ಯರಮರಸ್ ಅತ್ಯಾಧುನಿಕ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಮತ್ತು ಹಟ್ಟಿ ಚಿನ್ನದ ಗಣಿಯಲ್ಲಿ ಪರಿಸರ ಸಂರಕ್ಷಣೆ, ಗಿಡ-ಮರಗಳನ್ನು ಬೆಳೆಸುವುದು ಮತ್ತು ಮಾಲಿನ್ಯ ನಿಯಂತ್ರಣದ ಉಪಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಈ ಮೂರೂ ಸ್ಥಳಗಳಿಗೆ ಶೀಘ್ರದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.