ಬುಧವಾರ, ಅಕ್ಟೋಬರ್ 23, 2019
25 °C

ಹೈ-ಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ: 7ರಂದು ರೈಲು ತಡೆ

Published:
Updated:

ಬೆಂಗಳೂರು: ಸಂವಿಧಾನದ 371ನೇ ವಿಧಿಯಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ `ಕನ್ನಡ ಒಕ್ಕೂಟ~ ಇದೇ 7ರಂದು ರಾಜ್ಯದಾದ್ಯಂತ ರೈಲು ತಡೆ ನಡೆಸಲಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.ಶನಿವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ರೈಲು ತಡೆ ಚಳವಳಿ ಮಾರನೆಯ ದಿನ ಬೆಳಿಗ್ಗೆ 8 ಗಂಟೆಯವರೆಗೆ ಮುಂದುವರೆಯಲಿದೆ. ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಚಳವಳಿಯನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲಾಗುವುದು. ಅಗತ್ಯ ಕಂಡುಬಂದರೆ ಫೆಬ್ರುವರಿ ಕೊನೆ ವಾರದಲ್ಲಿ ರಾಜ್ಯ ಬಂದ್‌ಗೆ ಕರೆ ನೀಡಲಾಗುವುದು ಎಂದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)