ಮಂಗಳವಾರ, ಮೇ 11, 2021
25 °C

ಹೊಂಡ: ಅನುಮೋದನೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಕುರುಡುಮಲೆ ಗ್ರಾಮದಲ್ಲಿ ಮಳೆ ನೀರು ಸಂಗ್ರಹಣೆಗೆ ಹೊಂಡ ನಿರ್ಮಿಸಲು ಅನುಮೋದನೆ ನೀಡಬೇಕು ಎಂದು ಕೋರಿ ಗ್ರಾಮ ಪಂಚಾಯಿತಿ ಸದಸ್ಯರು ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರಿಗೆ ಮನವಿ ಸಲ್ಲಿಸಿದರು.ಗ್ರಾಮದ ಬೆಟ್ಟದಿಂದ ವ್ಯರ್ಥವಾಗಿ ಹರಿಯುವ ಮಳೆ ನೀರನ್ನು ತಡೆದು ಹೊಂಡಕ್ಕೆ ಹರಿಸಿ, ಶುದ್ಧೀಕರಿಸಿ ಗ್ರಾಮದ ಜನರಿಗೆ ಕುಡಿಯಲು ಪೂರೈಸ ಬೇಕೆಂದು ಮಂಗಳವಾರ ನಡೆದ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಧ ರಿಸಲಾಗಿದೆ. ಅದಕ್ಕೆ ಅನುಮೋದನೆ ನೀಡಬೇಕು ಎಂದು ಕೋರಿದರು.ಗ್ರಾಮದ ಗಣಪತಿ ದೇವಾಲಯದ ಮುಂದೆ ಹೊಂಡ ನಿರ್ಮಿಸಿ, ಅಲ್ಲಿ ಸಂಗ್ರಹವಾಗುವ ನೀರನ್ನು ಶುದ್ಧೀಕರಿಸಿ ದರೆ ಸುಮಾರು 3500 ಗ್ರಾಮಸ್ಥರಿಗೆ ಮತ್ತು ದೇವಾಲಯಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರನ್ನು ಪೂರೈ ಸಲು ಸಾಧ್ಯ. ಈ ನಿಟ್ಟಿನಲ್ಲಿ ಯೋಜನೆ ತಯಾರಿಸಲು, ಅದಕ್ಕಾಗಿ ಸಮೀಕ್ಷೆ ನಡೆಸಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.ಗ್ರಾ.ಪಂ. ಸದಸ್ಯರಾದ ಎಂ. ಗೋಪಾಲ್, ಕೆ.ಮುನಿಯಪ್ಪ, ಜಿ.ಕೆ. ವೆಂಕಟರಾಂ, ಗ್ರಾಮಸ್ಥರಾದ ವಿನಾಯಕ, ನಾಗಮ್ಮ, ನಾರಾಯಣಪ್ಪ, ಚಲಪತಿ, ನಾರಾಯಣಸ್ವಾಮಿ, ಶಿವಣ್ಣ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.