ಹೊಂಡ, ಕೆಸರು ರಸ್ತೆ: ಒಳಚರಂಡಿ ಮಂಡಳಿಗೆ ಶಾಪ!

ಸೋಮವಾರ, ಮೇ 20, 2019
30 °C

ಹೊಂಡ, ಕೆಸರು ರಸ್ತೆ: ಒಳಚರಂಡಿ ಮಂಡಳಿಗೆ ಶಾಪ!

Published:
Updated:

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಸೇರಿದಂತೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ವಿವಿಧೆಡೆ ರಸ್ತೆ ಅಗೆದು ಮ್ಯಾನ್‌ಹೋಲ್ ನಿರ್ಮಾಣ ಕಾಮಗಾರಿ ಬಳಿಕ ಪೂರ್ಣ ಪ್ರಮಾಣದಲ್ಲಿ ರಸ್ತೆ ದುರಸ್ತಿಗೊಳಿಸದಿರುವುದರಿಂದ ಜನರು ರಸ್ತೆಯಲ್ಲಿ ಹೊಂಡ, ಕೆಸರು, ದೂಳಿನ ಕಷ್ಟ ಎದುರಿಸಬೇಕಾಗಿದೆ.ಇಲ್ಲಿನ ಬಂಟ್ವಾಳ-ಜಕ್ರಿಬೆಟ್ಟು ಮತ್ತು ಬಂಟ್ವಾಳ-ಬಸ್ತಿಪಡ್ಪು ಹಾಗೂ ಬಂಟ್ವಾಳ-ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ಮತ್ತಿತರ ಲಘು ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ನಡೆದಾಡಲು ಅಸಾಧ್ಯ ಎಂಬ ದುಸ್ಥಿತಿ ಎದುರಾಗಿದೆ.ಪುರಸಭಾ ವ್ಯಾಪ್ತಿಯ ಲೊರೆಟ್ಟೊ, ಬಾರೆಕಾಡು, ಜಕ್ರಿಬೆಟ್ಟು, ಬಸ್ತಿಪಡ್ಪು, ಪಾಣೆಮಂಗಳೂರು, ಗೂಡಿನಬಳಿ, ಪರ್ಲಿಯಾ, ಕೈಕುಂಜೆ ಮತ್ತಿತರ ಕಡೆಗಳಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕಳೆದ ಎರಡು ವರ್ಷಗಳಿಂದ ಆರಂಭಗೊಂಡ ಮ್ಯಾನ್‌ಹೋಲ್ ನಿರ್ಮಾಣ ಹಾಗೂ ಆವೆಮಣ್ಣಿನ ಮಾದರಿ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ನಡೆದಿತ್ತು.

 

ಇದೀಗ ಅವರು ಅಗೆದು ಹಾಕಿದ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಅಥವಾ ಡಾಂಬರೀಕರಣಗೊಳಿಸದಿರುವ ಪರಿಣಾಮ ಕೆಲವೆಡೆ ರಸ್ತೆ ಕುಸಿತಕ್ಕೀಡಾಗಿದೆ. ಇನ್ನೂ ಕೆಲವೆಡೆ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇದರಿಂದಾಗಿ ಇಲ್ಲಿನ ನಾಗರಿಕರು ಒಳಚರಂಡಿ ಮಂಡಳಿಗೆ ಹಿಡಿಶಾಪ ಹಾಕುವಂತಾಗಿದೆ.ಎಲ್ಲೆಡೆ ಕೆಸರುಮಯಗೊಂಡು ಹೊಂಡಗಳೇ ತುಂಬಿಕೊಂಡಿರುವ ಈ ರಸ್ತೆಯಲ್ಲಿ ಪಾದಚಾರಿಗಳಿಗೆ ನಡೆದಾಡಲು ದುಸ್ತರವಾಗಿದೆ. ಒಂದೆಡೆ ಕೆಸರಿನ ಸಿಂಚನವಾದರೆ, ಇನ್ನೊಂದೆಡೆ ಬಿಸಿಲು, ದೂಳು ಹೇಳತೀರದು.ಈ ಬಗ್ಗೆ ಸಾಕಷ್ಟು ಬಾರಿ ಪ್ರತಿಭಟನೆ ನಡೆದಿದ್ದು, ಪುರಸಭೆಯ ಸಾಮಾನ್ಯ ಸಭೆಯಲ್ಲಿಯೂ ಭಾರೀ ಚರ್ಚೆ ನಡೆದಿತ್ತು.ಈ ನಡುವೆ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಕಳಪೆ ಕಾಮಗಾರಿಯ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಆರಂಭದಲ್ಲಿ ನಡೆಸಿದ್ದ ಕರಾರಿನಂತೆ ರಸ್ತೆ ದುರಸ್ತಿ ಹಾಗೂ ಡಾಂಬರೀಕರಣಕ್ಕಾಗಿ ಒಳಚರಂಡಿ ಮಂಡಳಿಯು ಲೋಕೋಪಯೋಗಿ ಇಲಾಖೆಗೆ ರೂ. 66 ಲಕ್ಷ ಮೊತ್ತ ಪಾವತಿಸಿದ್ದು, ಪುರಸಭೆಗೆ ಪಾವತಿಸಬೇಕಿದ್ದ ರೂ.1.34 ಕೋಟಿ ಮೊತ್ತ ಬಾಕಿ ಇರಿಸಿಕೊಂಡಿದೆ ಎಂದು ಪುರಸಭಾಧ್ಯಕ್ಷ ದಿನೇಶ ಭಂಡಾರಿ ಅವರು  `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry