ಹೊಂದಾಣಿಕೆ ಕೊರತೆ: ಅಭಿವೃದ್ಧಿ ಕುಂಠಿತ

7

ಹೊಂದಾಣಿಕೆ ಕೊರತೆ: ಅಭಿವೃದ್ಧಿ ಕುಂಠಿತ

Published:
Updated:

ಕೊಳ್ಳೇಗಾಲ: ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರಲ್ಲಿ ಹೊಂದಾಣಿಕೆ ಕೊರತೆಯಿಂದ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.ತಾಲ್ಲೂಕಿನ ಹನೂರು ಸರ್ಕಾರಿ ಹಿರಿಯ ಮಾದರಿ ಶಾಲೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಮಂಗಳ ವಾರ ಏರ್ಪಡಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.ಮುಖ್ಯಶಿಕ್ಷಕರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ರಾಜಕೀಯ ಮಾಡದೇ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.ಶಾಲೆಯಿಂದ ಹೆಚ್ಚಿನ ಮಕ್ಕಳು ಹೊರಗುಳಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮಕ್ಕಳು ಮರಳಿ ಶಾಲೆಗೆ ಸೇರ್ಪಡೆಗೊಳ್ಳುವಂತೆ ಮಾಡಬೇಕು ಮತ್ತು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ನುಡಿದರು.ಚಾಮರಾಜನಗರ ಉಪನ್ಯಾಸಕ ಸುರೇಶ್‌ಗೌಡ ಮಾತನಾಡಿದರು. ಶಿಕ್ಷಣಾಧಿಕಾರಿ ಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗಲಾಂಬಿಕ, ಮಾಜಿ ಅಧ್ಯಕ್ಷ ವೆಂಕಟರಮಣ ನಾಯ್ಡು, ಚಿಕ್ಕತಮ್ಮಯ್ಯ, ಬಿಆರ್‌ಸಿ ಆನಂದ್, ಚಿಕ್ಕತಮ್ಮಯ್ಯ ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry