ಹೊಟೇಲ್ ಮಾಲೀಕರ ಸಂಘದ ಸಮ್ಮೇಳನ ನಾಳೆಯಿಂದ
ಮೈಸೂರು: ಕರ್ನಾಟಕ ಪ್ರದೇಶ ಹೊಟೇಲ್ ಮತ್ತು ಉಪಾಹಾರ ಮಂದಿರಗಳ ಸಂಘದ 16ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ನಗರದ ರಾಜೇಂದ್ರ ಕಲಾಮಂದಿರದಲ್ಲಿ ಡಿ.18 ಮತ್ತು 19 ರಂದು ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನವನ್ನು 18 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ, ಗೃಹ ಸಚಿವ ಆರ್.ಅಶೋಕ, ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಭಾಗವಹಿಸಲಿದ್ದಾರೆ. ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಡಿ.19ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.