ಸೋಮವಾರ, ಜೂನ್ 21, 2021
21 °C

ಹೊನ್ನಾಳಿಗೆ ವಾರದಲ್ಲಿ ಬಸ್ ಡಿಪೋ ಮಂಜೂರು: ಎಂಪಿಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ವಾರದೊಳಗೆ ಹೊನ್ನಾಳಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಸ್ಥಾಪನೆಗೆ ಅಗತ್ಯವಿರುವ 6.15ನಿವೇಶನ ಮಂಜೂರಾಗಿದೆ. ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.ವಾರದೊಳಗೆ ಪಟ್ಟಣಕ್ಕೆ ಸರ್ಕಾರಿ ಡಿಪ್ಲೊಮಾ ಕಾಲೇಜು ಕೂಡಾ ಮಂಜೂರಾಗಲಿದೆ ಎಂದು ಅವರು ಹೇಳಿದರು. ಪಟ್ಟಣದಲ್ಲಿ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೂಲಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ತಾಲ್ಲೂಕಿನ ಮಲ್ಲೇದೇವರಕಟ್ಟೆ ಗ್ರಾಮದಲ್ಲಿ 10 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದರು.ತಾಲ್ಲೂಕಿನ ಮಾದನಬಾವಿ ಬಳಿ 12 ಎಕರೆ ಪ್ರದೇಶದಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿಶಾಲೆ ನಿರ್ಮಾಣಗೊಳ್ಳುತ್ತಿದೆ. ಕಿತ್ತೂರ ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣಕ್ಕಾಗಿ ಎಚ್. ಕಡದಕಟ್ಟೆ ಗ್ರಾಮದ ಬಳಿ 9.15 ಎಕರೆ ಜಮೀನು ಗುರುತಿಸಲಾಗಿದೆ. ಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ 7 ಎಕರೆ ಜಮೀನು ನೀಡಲಾಗಿದೆ.

 

ಪ್ರಾಥಮಿಕ ಶಾಲೆಗೆ 3 ಎಕರೆ ಜಮೀನು ದೊರಕಿಸಲಾಗಿದೆ. ತಾಲ್ಲೂಕಿನ ಟಿ. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗೆಂದು 5 ಎಕರೆ ಜಮೀನು ನೀಡಲಾಗಿದೆ. ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಬಿಸಿಎಂ ಹಾಸ್ಟೆಲ್ ನಿರ್ಮಾಣಕ್ಕೆ 1 ಎಕರೆ ಜಮೀನು ನೀಡಲಾಗಿದೆ ಎಂದು ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.