ಶನಿವಾರ, ಮೇ 15, 2021
22 °C

ಹೊಯ್ಸಳ ಸೇನೆ:ಅಧ್ಯಕ್ಷನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟ್ಯಾಕ್ಸ್ ಪ್ರೊ ಸಲೂಷನ್ ಕಂಪೆನಿಯ ವ್ಯವಸ್ಥಾಪಕ ರಾಕೇಶ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹೊಯ್ಸಳ ಸೇನೆಯ ಅಧ್ಯಕ್ಷ ನಂಜೇಗೌಡನನ್ನು ಬಸವನಗುಡಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.ರಾಕೇಶ್ ಶೆಟ್ಟಿ ಅವರು ಕಂಪೆನಿಯ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹೊಯ್ಸಳ ಸೇನೆ ಕಾರ್ಯಕರ್ತರು ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು ಮಂಗಳವಾರ ರಾಕೇಶ್ ಅವರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದರು.ಘಟನೆ ಸಂಬಂಧ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ರಾಕೇಶ್ ಬಸವನಗುಡಿ ಠಾಣೆಯಲ್ಲಿ ದೂರು ನೀಡಿದ್ದರು.ದೂರಿನನ್ವಯ ನಂಜೆಗೌಡ ಅವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.