ಕೊಪ್ಪಳ: ಶಾಸಕ ಸಂಗಣ್ಣ ಕರಡಿ ಗುರುವಾರ ಬೆಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ಶಾಸಕ ಸ್ಥಾನದ ರಾಜೀನಾಮೆ ಸಲ್ಲಿಸಿದ್ದು, ಅವರು ಬಿಜೆಪಿ ಸೇರುವ ಕುರಿತಂತೆ ಕೇಳಿಬಂದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದೇ 9ರಂದು ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಪ್ರಕಟಿಸಿ 2008ರ ಮೇ 16ರಂದು ನಡೆದ ಚುನಾವಣೆಯಲ್ಲಿ ತಮ್ಮನ್ನು ಆರಿಸಿದ ಮತದಾರರ ಮೇಲೆ ಮತ್ತೊಂದು ಚುನಾವಣೆ ಹೇರಿದ್ದಾರೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದ ಸಂಗಣ್ಣ ಏಕಾಏಕಿ ಬಿಜೆಪಿಯನ್ನು ಸೇರಲಿರುವ ವಿಷಯ ಸಹಜವಾಗಿಯೇ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕ್ಷೇತ್ರ ಅಭಿವೃದ್ಧಿಯೇ ಈ ನಿರ್ಧಾರಕ್ಕೆ ಕಾರಣ ಎಂಬುದಾಗಿ ಸಂಗಣ್ಣ ಹೇಳಿದ್ದಾರೆ. ತಮ್ಮ ನಾಯಕ ಸಂಗಣ್ಣ ಸಚಿವರಾಗಬೇಕು ಎಂಬ ಕಾರ್ಯಕರ್ತರ ಒತ್ತಾಸೆಯೂ ಈ ನಿರ್ಧಾರದಿಂದ ಈಡೇರಲಿದೆ ಎಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

1994ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ಸಂಗಣ್ಣ ಕರಡಿ, 1999ರ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ನಂತರ 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಅವರು, 2008ರಲ್ಲಿ ನಡೆದ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ನಿಂದ ಸ್ಪರ್ಧಿಸಿ ಜಯ ಗಳಿಸಿರಿದ್ದರು. ಈಚೆಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವು ಕೇವಲ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಂಗಣ್ಣ ಅವರು ಜೆಡಿಎಸ್ನ ಜಿಲ್ಲಾ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈಗ ಪಕ್ಷವನ್ನೇ ತೊರೆದು ಬಿಜೆಪಿಯನ್ನು ಸೇರಲು ಸಂಗಣ್ಣ ನಿರ್ಧರಿಸಿದ ಹಿನ್ನೆಲೆಯಲ್ಲಿ ಕೊಪ್ಪಳ ತಾಲ್ಲೂಕಿನ ಜೆಡಿಎಸ್ನ ಎಲ್ಲ ಪದಾಧಿಕಾರಿಗಳು, ಮೂವರು ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ 6 ಸದಸ್ಯರು ಹಾಗೂ ನಗರಸಭೆ 16 ಸದಸ್ಯರು ಬಿಜೆಪಿ ಸೇರುವರು. ಇನ್ನು ಬಿಜೆಪಿ ಸೇರುವ ಬಗ್ಗೆ ನಿರ್ಧರಿಸುವುದನ್ನು ಉಳಿದ ತಾಲ್ಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರಿಗೇ ಬಿಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಸಾಲೋಣಿ ನಾಗಪ್ಪ ಪುತ್ರ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹುಲಿಹೈದರ್ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ವೀರೇಶ ಸಾಲೋಣಿ ಅವರು ಬಿಜೆಪಿ ಸೇರುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಅವರು ಬಿಜೆಪಿ ಸೇರುವುದು ಖಚಿತ ಎಂಬುದಾಗಿ ಇವೇ ಮೂಲಗಳು ವಿಶ್ವಾಸ ವ್ಯಕ್ತಪಡಿಸಿವೆ. ಸಿ.ಎಂ. ಭೇಟಿ: ಮಾರ್ಚ್ ಎರಡನೇ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡುವರುಎಂದು ಸಂಗಣ್ಣ ಆಪ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.