ಹೊಳಲ್ಕೆರೆ: ಪಟ್ಟಣದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ನಿಲಯವನ್ನು ಶೀಘ್ರವಾಗಿ ಆರಂಭಿಸಬೇಕು ಎಂದು ಒತ್ತಾಯಿಸಿ ದಸಂಸ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ರಾಜ್ಯ ಘಟಕದ ಸಂಚಾಲಕ ಪಾಂಡುರಂಗಸ್ವಾಮಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ನಿಲಯವನ್ನು ಇದುವರೆಗೂ ಆರಂಭಿಸಿಲ್ಲ.

ಶಾಲೆ, ಕಾಲೇಜುಗಳು ಆರಂಭವಾಗಿ ಒಂದು ತಿಂಗಳು ಕಳೆದಿದ್ದು, ಹಾಸ್ಟೆಲ್ ಆರಂಭವಾಗದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ದೂರದ ಊರುಗಳಿಂದ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಬಸ್ನಲ್ಲಿ ಬರುವಂತಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹಳೆಯ ವಿದ್ಯಾರ್ಥಿಗಳಿಗೆ ಜೂನ್ ಮೊದಲ ದಿನದಿಂದಲೇ ಹಾಸ್ಟೆಲ್ ಆರಂಭಿಸಬೇಕು.

ವಾರ್ಡನ್ಗಳು ಕಾಲೇಜು ಆರಂಭದ ದಿನದಿಂದಲೇ ಅನುದಾನ ಪಡೆಯುತ್ತಾರೆ. ಆದರೆ, ಹಾಸ್ಟೆಲ್ ಮಾತ್ರ ಇನ್ನೂ ಆರಂಭವಾಗಿಲ್ಲ ಎಂದು ಆರೋಪಿಸಿದರು.ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದಪ್ರತಿಭಟನಾಕಾರರು, ತಹಶೀಲ್ದಾರ್ ಬಿ.ಬಿ. ಸರೋಜಾ ಅವರಿಗೆ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದರು.ಆರ್. ಶಿವಕುಮಾರ್, ರೇವಣಸಿದ್ದಪ್ಪ, ಕುಮಾರ್ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.