ಮಂಗಳವಾರ, ಜನವರಿ 28, 2020
18 °C

ಹೊಸದುರ್ಗದಲ್ಲಿ 27 ರಿಂದ ರಾಜ್ಯ ಮಟ್ಟದ ಯುವಜನ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗದಲ್ಲಿ ಜ. 27ರಿಂದ 29ರವರೆಗೆ 2009-10ನೇ ಸಾಲಿನ ರಾಜ್ಯ ಮಟ್ಟದ ಯುವಜನ ಸಮಾವೇಶ,ಯುವಜನ ಮೇಳ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 2,500 ಯುವಕ-ಯುವತಿಯರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ತಾಲ್ಲೂಕು, ಜಿಲ್ಲಾ ಹಾಗೂ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.2009-10ನೇ ಸಾಲಿನ ರಾಜ್ಯ ಯುವಜನ ಪ್ರಶಸ್ತಿಯನ್ನು 10 ಜನರಿಗೆ ಮತ್ತು 2 ಸಂಘಗಳಿಗೆ ನೀಡಲಾಗುತ್ತದೆ. ರಾಜ್ಯಮಟ್ಟದ ಯುವಜನ ಮೇಳದಲ್ಲಿ ಸುಮಾರು 16 ವಿವಿಧ ಸ್ಪರ್ಧೆಗಳು ನಡೆಯಲಿವೆ. ವಿಜೇತರಾದವರಿಗೆ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರೂ. 2 ಸಾವಿರ, ದ್ವಿತೀಯ ಸ್ಥಾನ ಪಡೆದವರಿಗೆ ರೂ. 1 ಸಾವಿರ ಹಾಗೂ ತೃತೀಯ ರೂ. 750 ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರೂ. 2 ಸಾವಿರ, ದ್ವಿತೀಯ ಸ್ಥಾನಕ್ಕೆ ರೂ. 1 ಸಾವಿರ ಹಾಗೂ ತೃತೀಯ ಸ್ಥಾನಕ್ಕೆ ರೂ. 750 ರೂ. ನಗದು ಬಹುಮಾನ ನೀಡಲಾಗುತ್ತದೆ ಎಂದು ವಿವರಿಸಿದರು.ಕಾರ್ಯಕ್ರಮದ ಉದ್ಘಾಟನೆ 27ರಂದು ಸಂಜೆ 4 ಕ್ಕೆ ಹೊಸದುರ್ಗ ಪಟ್ಟಣದಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯ ಮೀನುಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)