ಹೊಸ ಅಡ್ವೊಕೇಟ್ ಜನರಲ್ ನೇಮಕ

7

ಹೊಸ ಅಡ್ವೊಕೇಟ್ ಜನರಲ್ ನೇಮಕ

Published:
Updated:

ಬೆಂಗಳೂರು: ರಾಜ್ಯ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲ ಎಸ್. ವಿಜಯಶಂಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಬಿ.ವಿ. ಆಚಾರ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇವರನ್ನು ನೇಮಕ ಮಾಡಲಾಗಿದೆ. ವಿಜಯಶಂಕರ್ ಅವರು 1962ರಿಂದ ವಕೀಲಿ ವೃತ್ತಿ ನಡೆಸುತ್ತಿದ್ದಾರೆ. 1993ರಲ್ಲಿ ಹಿರಿಯ ವಕೀಲರಾಗಿ ಬಡ್ತಿ ಹೊಂದಿದ್ದಾರೆ. 1996ರಿಂದ 1999ರ ವರೆಗೆ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ರಾಜ್ಯದ ಪರವಾಗಿ ಇವರು ವಾದಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry