ಬುಧವಾರ, ಮೇ 12, 2021
25 °C

`ಹೊಸ ಆವಿಷ್ಕಾರಕ್ಕೆ ಅನುದಾನ ಮೀಸಲಿಡಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: `ಹೊಸ ಅವಿಷ್ಕಾರಗಳನ್ನು ಕಂಡುಹಿಡಿಯಲು ರೂ5 ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸೂಚಿಸಲಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಆರ್. ವಿ.ದೇಶಪಾಂಡೆ ತಿಳಿಸಿದರು.ಇಲ್ಲಿನ ರೇವಾ ತಾಂತ್ರಿಕ ಮತ್ತು ನಿರ್ವಹಣೆ ಮಹಾವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗಾಗಿ ಈಚೆಗೆ ಆಯೋಜಿಸಿದ್ದ `ಶುಭವಿದಾಯ' ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿ, `ಇದರಿಂದ ವಿದ್ಯಾರ್ಥಿಗಳು ಹೊಸ ಹೊಸ ಅವಿಷ್ಕಾರಗಳನ್ನು ಕಂಡುಹಿಡಿಯಲು ಪ್ರೇರಣೆ ನೀಡಿದಂತೆ ಆಗುತ್ತದೆ' ಎಂದರು.ರೇವಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಶ್ಯಾಮರಾಜು ಅಧ್ಯಕ್ಷತೆ ವಹಿಸಿದ್ದರು. ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ 900 ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತು. ಜೊತೆಗೆ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ 35 ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ಮತ್ತು ಪಾರಿತೋಷಕ ವಿತರಿಸಲಾಯಿತು.ರೇವಾ ವಿವಿ ಕುಲಪತಿ ಡಾ.ವಿ.ಜಿ.ತಳವಾರ್, ಕುಲಸಚಿವ ಡಾ.ಎಸ್.ಆರ್.ಪೂಜಾರ್, ತಾಂತ್ರಿಕ ಮತ್ತು ನಿರ್ವಹಣೆ ಮಹಾವಿದ್ಯಾಲಯದ ಡೀನ್ ಡಾ.ಧನಂಜಯ, ಪ್ರಾಂಶುಪಾಲ ಡಾ.ರಾಣಾಪ್ರತಾಪರೆಡ್ಡಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.