ಬೆಂಗಳೂರು: `ವಿದ್ಯಾರ್ಥಿಗಳು ಹಲವು ಪ್ರಯೋಗಗಳ ಮೂಲಕ ಕಂಡುಕೊಳ್ಳುವ ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸಲು ಕಾಲೇಜು ಪ್ರತ್ಯೇಕ ಕ್ಲಬ್ ಸ್ಥಾಪನೆ ಮಾಡಿ, ಅದರ ಕಾರ್ಯ ಚಟುವಟಿಕೆಗಳಿಗಾಗಿ ಹಣ ಮೀಸಲಿಡಬೇಕು' ಎಂದು ಉನ್ನತ ಶಿಕ್ಷಣ ಸಚಿವ ಆರ್. ವಿ.ದೇಶಪಾಂಡೆ ಸಲಹೆ ನೀಡಿದರು.

ಎನ್.ಎಂ.ಕೆ.ಆರ್.ವಿ.ಮಹಿಳಾ ಕಾಲೇಜು ನಗರದಲ್ಲಿ ಶನಿವಾರ ಆಯೋಜಿಸಿದ್ದ ಪದವಿ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ರಾಜ್ಯದಾದ್ಯಂತ ಸರ್ಕಾರಿ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆಯಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಇದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ಖಾಸಗಿ ಕಾಲೇಜುಗಳಿಗೂ ಸರ್ಕಾರದ ನೆರವು ಇರುತ್ತದೆ' ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಕೆ.ಪಾಂಡುರಂಗ ಶೆಟ್ಟಿ , `ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಕೇವಲ ಶೇ4ರಷ್ಟು ಬಜೆಟ್ ಮೀಸಲಿಡುತ್ತಿದೆ. ಆದರೆ ಇದರ ಪ್ರಮಾಣ ಹೆಚ್ಚಾದರೆ ಇನ್ನಷ್ಟು ಬಡವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬಹುದು' ಎಂದು ಹೇಳಿದರು.

ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿ ಕುರಿತ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಆರ್. ವಿ.ದೇಶಪಾಂಡೆ ಹೇಳಿದರು.

`ತುಮಕೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತೇವೆ' ಎಂದು ಪುನರುಚ್ಚಿಸಿದರು. `ಬಿ.ಇಡಿ ಕಾಲೇಜುಗಳ ವರದಿಯನ್ನು ಈಚೆಗಷ್ಟೆ ಇಲಾಖೆ ಪಡೆದುಕೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.