ಭಾನುವಾರ, ಜೂನ್ 20, 2021
25 °C

ಹೊಸ ಪಿಂಚಣಿ ನೀತಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೂತನ ಪಿಂಚಣಿ ನೀತಿಯನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ನಗರದ ಬಹುಮಹಡಿ ಕಟ್ಟಡದ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ, ‘ರಾಷ್ಟ್ರೀಯ ನಿವೃತ್ತಿ ಕಾಯ್ದೆ– 2013 ಜಾರಿಗೆ ಬಂದರೆ ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತದೆ. ಇದರಿಂದ ನೌಕರರು ಪಿಂಚಣಿ ಸೌಲಭ್ಯದಿಂದ ವಂಚಿತರಾ ಗಬೇಕಾಗುತ್ತದೆ. ಹೀಗಾಗಿ ನೂತನ ಪಿಂಚಣಿ ನೀತಿ ರದ್ದುಪಡಿಸಬೇಕು’ ಎಂದು ಒತ್ತಾ ಯಿಸಿದರು.‘ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗದ ವ್ಯಾಪ್ತಿಗೆ ರಾಜ್ಯ ಸರ್ಕಾರಿ ನೌಕರರನ್ನೂ ಒಳಪಡಿ ಸಬೇಕು. ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ನೀಡ ಬೇಕು. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿ ರುವ ನೌಕರರ ಸೇವೆಯನ್ನು ಕಾಯಂಗೊಳಿಸ ಬೇಕು’ ಎಂದು ಅವರು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.