ಹೊಸ ಬ್ಯಾಂಕ್ ಸ್ಥಾಪನೆಗೆ 26 ಅರ್ಜಿ
ಮುಂಬೈ (ಪಿಟಿಐ): ಹೊಸ ಬ್ಯಾಂಕ್ ಸ್ಥಾಪನೆಗೆ ಪರವಾನಗಿ ಕೋರಿ ಇದುವರೆಗೆ 26 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಆರ್. ಗಾಂಧಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಭಾರತೀಯ ಅಂಚೆ, ಎಲ್ಐಸಿ, ಎಚ್ಎಫ್ಎಲ್, ರಿಲಯನ್ಸ್ ಕ್ಯಾಪಿಟಲ್, ಆದಿತ್ಯಾ ಬಿರ್ಲಾ, ಎಲ್ಅಂಡ್ಟಿ ಸಂಸ್ಥೆಗಳು ಪರವಾನಗಿ ಕೋರಿ ಅರ್ಜಿ ಸಲ್ಲಿಸಿವೆ ಎಂದು ಅವರು ಹೇಳಿದರು.
ಹೊಸ ಬ್ಯಾಂಕ್ ಸ್ಥಾಪಿಸುವ ಸಂಸ್ಥೆಗಳು ಶೇ 25ರಷ್ಟು ಶಾಖೆಗಳನ್ನು ಬ್ಯಾಂಕಿಂಗ್ ಸೌಲಭ್ಯಗಳು ಇಲ್ಲದ ಗ್ರಾಮೀಣ ಪ್ರದೇಶಗಳಲ್ಲೇ ತೆರೆಯಬೇಕು ಎಂದು `ಆರ್ಬಿಐ' ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆಯನ್ನೂ ಹೊರಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.