ಶನಿವಾರ, ಮೇ 8, 2021
26 °C

ಹೊಸ ಮದ್ಯದಂಗಡಿಗಳಿಗೆ ವೀರೇಂದ್ರ ಹೆಗ್ಗಡೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಮದ್ಯದ ಅಂಗಡಿಗಳಿಗೆ ಪರವಾನಗಿ ಕೊಡುವ ಸರ್ಕಾರದ ಚಿಂತನೆಗೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂತಹ ನಿರ್ಧಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಸುಲಭವಾಗಿ ದೊರೆಯುವಂತಾಗುತ್ತದೆ. ಗ್ರಾಮೀಣರು ದುಡಿದ ಹಣವೆಲ್ಲ ಮದ್ಯದ ಪಾಲಾಗುತ್ತದೆ. ಈ ಬಗ್ಗೆ ಜನ ಜಾಗೃತಿ ವೇದಿಕೆಯಿಂದ ಮನವಿ ಸಲ್ಲಿಸಲಾಗುವುದು. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.ಮದ್ಯಪಾನ ಸಂಪೂರ್ಣ ನಿಷೇಧ ಸಾಧ್ಯವಿಲ್ಲ. ಬೆಳ್ತಂಗಡಿ ತಾಲ್ಲೂಕನ್ನು ಮದ್ಯ ಮುಕ್ತಗೊಳಿಸುವ ಪ್ರಯತ್ನ ಯಶಸ್ವಿಯಾಗಲಿಲ್ಲ. ಆದರೆ,6 ಅತಿ ಹೆಚ್ಚು ಮದ್ಯದಂಗಡಿ ನೀಡುವುದರಿಂದ ಸಮಸ್ಯೆ ಮತ್ತಷ್ಟು ಹೆಚ್ಚುತ್ತದೆ. ಜನರನ್ನು ಮದ್ಯ ಮುಕ್ತರಾಗುವತ್ತ ಪರಿವರ್ತನೆ ಮಾಡುವ ಕೆಲಸಕ್ಕೆ ಹಿನ್ನಡೆಯಾಗುತ್ತದೆ ಎಂದರು.ಬಯಲುಸೀಮೆಗೆ ನೇತ್ರಾವತಿ ನದಿ ನೀರು ಹರಿಸುವ ಬಗ್ಗೆ ಅಲ್ಲಿನ ಜನರಲ್ಲಿ ಭಯವಿದೆ. ಸರ್ಕಾರ ಅಲ್ಲಿನ ಜನರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಬೇಕು. ಅಲ್ಲಿನ ಜನರ ಸಭೆ ಕರೆದು ಯೋಜನೆ ಬಗ್ಗೆ ತಾಂತ್ರಿಕ ಮಾಹಿತಿ ನೀಡಬೇಕು. ತಾತ್ವಿಕವಾಗಿ ಅಲ್ಲಿನ ಜನರ ಒಪ್ಪಿಗೆ ಪಡೆಯಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.