ಗುರುವಾರ , ಮೇ 19, 2022
20 °C

ಹೊಸ ವರ್ಷಕ್ಕಾದರೂ ತೆಲಂಗಾಣ ರಚನೆಯಾಗಲಿ: ಅಡ್ವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

  ನಿಜಾಮಾಬಾದ್ (ಪಿಟಿಐ): ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ಒದಗಿಸುವಲ್ಲಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಿಂದ ಹಿಂದೆ ಸರಿದಿದೆ ಎಂದು ಆರೋಪಿಸಿರುವ ಬಿಜೆಪಿಯ ರಾಷ್ಟ್ರೀಯ ನಾಯಕ ಎಲ್.ಕೆ.ಅಡ್ವಾಣಿ ಅವರು, ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡು ಹೊಸ ವರ್ಷಕ್ಕಾದರೂ ಪ್ರತ್ಯೇಕ ತೆಲಂಗಾಣ ರಾಜ್ಯದ ಕನಸು ನನಸಾಗುವಂತೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ತಮ್ಮ ಜನ ಚೇತನ ಯಾತ್ರೆಯ ಸಂದರ್ಭದಲ್ಲಿ ಬುಧವಾರ ಇಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ~ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ದೃಢ ನಿರ್ಧಾರ ಕೈಗೊಂಡು ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಮಸೂದೆಯೊಂದನ್ನು ಮಂಡಿಸಿ 2012ರ ಜನವರಿ 1 ರಂದು ತೆಲಂಗಾಣ ರಾಜ್ಯ ರಚನೆಯಾಗುವಂತೆ ಮಾಡಲಿ~ ಎಂಬುದು ನನ್ನ ಹಾರೈಕೆ ಎಂದರು.

~ಪ್ರತ್ಯೇಕ ರಾಜ್ಯ ರಚನೆಗೆ ಆಂಧ್ರ ಪ್ರದೇಶದ ವಿಧಾನ ಸಭೆ ನಿರ್ಣಯ ಅಂಗಿಕರಿಸಬೇಕಿಲ್ಲ, ಸಂಸತ್ತು ಮುಂಬರುವ ಚಳಿಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಣಯ ಅಂಗಿಕರಿಸಿ ನೂತನ ರಾಜ್ಯ ರಚನೆಗೆ ಹಸಿರು ನಿಶಾನೆ ನೀಡಬಹುದು~ ಎಂದು ಅವರು ಪ್ರತಿಪಾದಿಸಿದರು.

ಎರಡು ವರ್ಷಗಳಿಂದು ಯುಪಿಎ ಸರ್ಕಾರ ದೃಢ ನಿರ್ಧಾರ ಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿರುವುದರಿಂದ ಈ ಪ್ರದೇಶಕ್ಕೆ ಅನ್ಯಾಯವಾಗುತ್ತಿದೆ. 15 ದಿನಗಳಲ್ಲಿ ಪ್ರತ್ಯೇಕ ರಾಜ್ಯ ರಚಿಸುವುದಾಗಿ ನುಡಿದಿದ್ದ ಗೃಹ ಸಚಿವರು ನಂತರ ತಮ್ಮ ಮಾತಿನಿಂದ ಹಿಂದೆ ಸರಿದರು ಎಂದು ಅಡ್ವಾಣಿ ಅವರು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.