ಹೊಸ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಸಚಿವ ಜಾರ್ಜ್

7

ಹೊಸ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಸಚಿವ ಜಾರ್ಜ್

Published:
Updated:

ಬೆಂಗಳೂರು: `ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳು ಹಳೆಯ ಮಾದರಿಯವು. ಅವುಗಳಲ್ಲಿ ಹೆಚ್ಚಿನವು ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಲಾಗಿದೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.ಜೈಶಂಕರ್ ಪರಾರಿಯಾದ ಹಿನ್ನೆಲೆಯಲ್ಲಿ ಸೋಮಾವಾರ ಕಾರಾಗೃಹಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಮೆರಿಕ ಮತ್ತು ಕೊರಿಯಾ ಮೂಲದ ಕಂಪೆನಿಗಳೊಂದಿಗೆ ಸದ್ಯದಲ್ಲೇ ಮಾತುಕತೆ ನಡೆಸಿ, ಸುಧಾರಿತ ಕ್ಯಾಮೆರಾಗಳನ್ನು ಖರೀದಿಸಲಾಗುವುದು. ಬ್ಯಾರಕ್‌ಗಳು ಹಾಗೂ ಅತಿ ಭದ್ರತೆಯ ಬ್ಲಾಕ್‌ನ ಕೊಠಡಿಯ ಬಾಗಿಲುಗಳಿಗೆ ಬಯೊಮೆಟ್ರಿಕ್ (ಬೆರಳಚ್ಚು) ವ್ಯವಸ್ಥೆ ಅಳವಡಿಸಲಾಗುವುದು' ಎಂದು ಹೇಳಿದರು.ನಂತರ ನಡೆದ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮಾ ಪಚಾವೊ, ಕಾರಾಗೃಹಗಳ ಇಲಾಖೆ ಎಡಿಜಿಪಿ ಕೆ.ವಿ.ಗಗನ್‌ದೀಪ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಜೈಶಂಕರ್ ಬಗ್ಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು  ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ನೆರೆ ರಾಜ್ಯಗಳ ಪೊಲೀಸ್ ಇಲಾಖೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry