ಹೋಂ ಸ್ಟೇ ಘಟನೆ ಇನ್ನಷ್ಟು ಬಂಧನ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಹೋಂ ಸ್ಟೇ ಘಟನೆ ಇನ್ನಷ್ಟು ಬಂಧನ

Published:
Updated:

ಮಂಗಳೂರು:  ನಗರದ ಪಡೀಲ್‌ನ `ಮಾರ್ನಿಂಗ್ ಮಿಸ್ಟ್~ ಹೋಂ ಸ್ಟೇ ಮೇಲೆ ಕಳೆದ ಶನಿವಾರ ದಾಳಿ ಮಾಡಿ ಯುವತಿಯರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ದಾಖಲಾಗದ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಕಂಡುಬಂದಿದೆ.ರಾಜ್ಯ ಮಹಿಳಾ ಆಯೋಗದಿಂದ ತೀವ್ರ ಆಕ್ಷೇಪಕ್ಕೆ ಗುರಿಯಾಗಿರುವ ಪೊಲೀಸರು ಇದೀಗ ತಪ್ಪನ್ನು ತಿದ್ದಿಕೊಳ್ಳಲು ಹೊರಟಿದ್ದು, ನೇರವಾಗಿ ದಾಳಿಯಲ್ಲಿ ತೊಡಗದೆ ಇದ್ದರೂ ಈ ಘಟನೆಯನ್ನು ನೋಡಿಯೂ ರಕ್ಷಣೆಗೆ ಮುಂದಾಗದ ಇತರ ಹಲವರನ್ನು ಬಂಧಿಸುವ ನಿರೀಕ್ಷೆ ಇದೆ.`ಎಫ್‌ಐಆರ್ ದಾಖಲಾದ 27 ಮಂದಿಯ ಪೈಕಿ ಈಗಾಗಲೇ 22 ಮಂದಿಯನ್ನು ಬಂಧಿಸಲಾಗಿದೆ. ವಿಡಿಯೊ ದೃಶ್ಯಗಳನ್ನು ಆಧರಿಸಿ ಇನ್ನೂ ಹಲವರನ್ನು ಬಂಧಿಸುವ ಚಿಂತನೆ ನಡೆಸಲಾಗುತ್ತಿದೆ~ ಎಂದು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಶುಕ್ರವಾರ `ಪ್ರಜಾವಾಣಿ~ಗೆ ತಿಳಿಸಿದರು.ವದಂತಿ: ಹಲ್ಲೆಗೊಳಗಾದ ಯುವತಿಯರ ಪೈಕಿ ಒಬ್ಬಾಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬ ವದಂತಿ ಶುಕ್ರವಾರ ಸಂಜೆ ನಗರದಲ್ಲಿ ವ್ಯಾಪಿಸಿತ್ತು. ಆದರೆ ಅಂತಹ ಯಾವುದೇ ಪ್ರಸಂಗವೂ ನಡೆದಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು.ಈ ಮಧ್ಯೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ಅವರು ಬೆಂಗಳೂರಿನಿಂದ ದೂರವಾಣಿಯಲ್ಲಿ `ಪ್ರಜಾವಾಣಿ~ಯನ್ನು ಸಂಪರ್ಕಿಸಿ, ಮಂಗಳೂರಿನಲ್ಲಿ ನಡೆದ ಘಟನೆಯಿಂದ ಸರ್ಕಾರ ಆಘಾತಗೊಂಡಿದೆ. ಗೃಹ ಸಚಿವರ ಸಹಿತ ಎಲ್ಲಾ ಸಚಿವರು, ಶಾಸಕರೂ ಹಲ್ಲೆ ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry