ಶನಿವಾರ, ಏಪ್ರಿಲ್ 10, 2021
32 °C

ಹೋರಾಟದಿಂದ ಶಾಶ್ವತ ನೀರು: ಸಚಿವ ಮುಮ್ತಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟದಿಂದ ಶೀಘ್ರ ಜಿಲ್ಲೆಗೆ ನೀರು ಹರಿದು ಬರುವಂತಾಗಬೇಕು ಎಂದು ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಖಾತೆ ಸಚಿವ ಡಾ.ಮುಮ್ತಾಜ್ ಅಲಿಖಾನ್ ಮಂಗಳವಾರ ಇಲ್ಲಿ ಅಭಿಪ್ರಾಯಪಟ್ಟರು.ನಗರದ ಕಂದವಾರದಲ್ಲಿ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಜೋಡಿ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಕಂದವಾರ ಗ್ರಾಮದಲ್ಲಿ ಕೋಮು ಸೌಹಾರ್ದ ಚೆನ್ನಾಗಿದೆ. ಇದರಿಂದಾಗಿ ಉರ್ದು ಶಾಲೆ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದೆ. ಉರ್ದು ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ತಮ್ಮ ಇಲಾಖೆಯ ವತಿಯಿಂದ ರೂ. 2 ಲಕ್ಷ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ ಸಚಿವ ಡಾ.ಮುಮ್ತಾಜ್ ಅಲಿಖಾನ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕಾಲದಲ್ಲಿ ಜಿಲ್ಲೆ ಹೆಚ್ಚಿನ ಅಭಿವೃದ್ಧಿ ಕಂಡಿದ್ದು ಮತ್ತೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಲ್ಲಿಗೆ ಬರಬೇಕು ಎಂದು ಮನವಿ ಮಾಡಿದರು.ಉಪವಿಭಾಗಾಧಿಕಾರಿ ವಸಂತ್‌ಕುಮಾರ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಲ್ಲಾಬಕಾಷ್, ಮುಖಂಡ ಕಂದಾವಾರ ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮತ್ತಿತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.