ಹೋರಾಟದ ಸ್ಮರಣೆಯಲ್ಲಿ ಪಾದಯಾತ್ರೆ

7

ಹೋರಾಟದ ಸ್ಮರಣೆಯಲ್ಲಿ ಪಾದಯಾತ್ರೆ

Published:
Updated:

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಹತ್ತನೇ ವರ್ಷಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯು ಮಂಗಳವಾರ ಚಿಕ್ಕಬಳ್ಳಾಪುರದಿಂದ ಮುದ್ದೇನಹಳ್ಳಿಯವರೆಗೆ ಪಾದಯಾತ್ರೆ ನಡೆಸಿತು.ಹೋರಾಟ ಸಮಿತಿ ಸದಸ್ಯರೊಂದಿಗೆ ರೈತ ಸಂಘ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸದಸ್ಯರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.ನಗರದ ಪ್ರವಾಸಿ ಮಂದಿರದಿಂದ ಮುದ್ದೇನಹಳ್ಳಿಯವರೆಗೆ ಕೈಗೊಳ್ಳಲಾದ ಪಾದಯಾತ್ರೆ-ಪ್ರತಿಭಟನೆಯಲ್ಲಿ ಶಾಸಕ ಕೆ.ಪಿ.ಬಚ್ಚೇಗೌಡ, ಮಾಜಿ ಶಾಸಕಿ ಜ್ಯೋತಿರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮಪಂಚಾಯಿತಿ ಸದಸ್ಯರು ಸಹ ಭಾಗವಹಿಸಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿದರು.ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, `ಶಾಶ್ವತ ನೀರಾವರಿ ಹೋರಾಟವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಾದಯಾತ್ರೆ-ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಒಂಬತ್ತು ವರ್ಷದಿಂದ ಹೋರಾಟ ನಡೆಸಲಾಗುತ್ತಿದ್ದು, ಹತ್ತನೇ ವರ್ಷಕ್ಕೆ ಕಾಲಿರಿಸಿದ ನಂತರವೂ ಹೋರಾಟ ಮಾಡಬೇಕಾದ ಪರಿಸ್ಥಿತಿಯಿದೆ~ ಎಂದರು.ಮಾಜಿ ಶಾಸಕ ಅಶ್ವತ್ಥನಾರಾಯಣ ರೆಡ್ಡಿ, ಸಿಪಿಎಂ ಮುಖಂಡ ಲಕ್ಷ್ಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಮುನೇಗೌಡ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ಕರ್ನಾಟಕ ಹಾಲು ಮಹಾಮಂಡಳಿ ನಿರ್ದೇಶಕ ಕೆ.ವಿ.ನಾಗರಾಜ್, ಜೆಡಿಎಸ್ ಮುಖಂಡ ಕೆ.ಟಿ.ನಾರಾಯಣಸ್ವಾಮಿ, ಕ್ರೀಡಾಪಟು ಮಂಚನಬಲೆ ಕೆ.ಶ್ರೀನಿವಾಸ್ ಮತ್ತಿತರರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry