ಮುಂಬೈ (ಪಿಟಿಐ) : ‘ಬಿಜೆಪಿಯಲ್ಲಿ ನರೇಂದ್ರ ಮೋದಿ ಯುಗ ಆರಂಭವಾಗಿದೆ ಎಂದ ಮಾತ್ರಕ್ಕೆ ಅಡ್ವಾಣಿ ಯುಗದ ಮುಕ್ತಾಯ ಎಂದಲ್ಲ. ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಂತಹ ವ್ಯಕ್ತಿಗೆ ಟಿಕೆಟ್ ನೀಡುವಲ್ಲಿ ವಿಳಂಬ ತೋರಿದ್ದು ಸರಿಯಲ್ಲ’ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಶಿವಸೇನೆ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಠಾಕ್ರೆ ಅವರು 'ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯ ಮೊದಲ ಪಟ್ಟಿಯಲ್ಲಿ ಅಡ್ವಾಣಿ ಹೆಸರು ಇರಬೇಕಿತ್ತು. ಪಕ್ಷದ ಹಿರಿಯ ನಾಯಕನಿಗೆ ಟಿಕೆಟ್ ನೀಡುವಲ್ಲಿ ವಿಳಂಬ ತೋರಿ, ಅವರಿಗೆ ಅವಮಾನ ಮಾಡಿದ್ದು ಏಕೆ?' ಎಂದು ಪ್ರಶ್ನಿಸಿದ್ದಾರೆ.

ಗಾಂಧಿನಗರದಿಂದ ಸ್ಪರ್ಧೆಗೆ ಸಿದ್ಧ ಎಂದು ಅಡ್ವಾಣಿ ಗುರುವಾರ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಶನಿವಾರ ಠಾಕ್ರೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.