ಬೆಂಗಳೂರು: ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಹೇಳಿದರು.

ದೇವಾಂಗ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಂಗಳೂರು ಕೇಂದ್ರ ಲೋಕಸಭಾ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಹಿಳಾ ಮಸೂದೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆದರೆ ಇದಕ್ಕೆ ವಿರೋಧ ಪಕ್ಷಗಳ ಸಹಕಾರ ಸಿಗಲಿಲ್ಲ ಎಂದರು.

ನರೇಂದ್ರ ಮೋದಿ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಮೀಸಲಾತಿ ನೀಡಲು ತೀರ್ಮಾನಿಸಿದ್ದು, ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ ಈ ಮಸೂದೆಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇತ್ತೀಚೆಗೆ ಬಿಎಂಟಿಸಿ ಬಸ್ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಲಾಗಿದೆ ಎಂದು ಹೇಳಿದರು.

ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಮಹಿಳೆಯರ ರಕ್ಷಣೆಗೆ ವಿಶೇಷ ಒತ್ತು ನೀಡಲಾಗಿತ್ತು. ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಪಕ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು ಎಂದು ತಿಳಿಸಿದರು.

ಮಹಿಳೆಯರಿಗೆ ರಕ್ಷಣೆ ಕೊಡಲಾಗದ ಕಾಂಗ್ರೆಸ್ ಸರ್ಕಾರ ಅವರ ಸಬಲೀಕರಣ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.

ಶಾಸಕ ಎಸ್.ಸುರೇಶ್ಕುಮಾರ್ ಮಾತನಾಡಿದರು, ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ತಾರಾ ಅನೂರಾಧ, ಶಿಲ್ಪಾ ಗಣೇಶ್, ಪದ್ಮಾ ಮುಖ್ಯಮಂತ್ರಿ ಚಂದ್ರು, ಪೂರ್ಣಿಮಾ ಪ್ರಕಾಶ್, ಸಚ್ಚಿದಾನಂದ ಮೂರ್ತಿ, ಬಿಬಿಎಂಪಿ ಸದಸ್ಯರಾದ ಗೋಪಿ, ಭಾಗ್ಯ, ಮಮತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.