ಗುರುವಾರ , ಜೂನ್ 24, 2021
22 °C

‘ಅಭಿವೃದ್ಧಿಗೆ ಶಿಕ್ಷಣವೇ ಅಸ್ತ್ರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಉಪ್ಪಾರ ಸಮುದಾಯ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.ತಾಲ್ಲೂಕಿನ ಬೂದಿತಿಟ್ಟು ಹಾಗೂ ಸರಗೂರು ಮೋಳೆ ಗ್ರಾಮದಲ್ಲಿ ಈಚೆಗೆ ಉಪ್ಪಾರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ಉಪ್ಪಾರ ಜನಾಂಗದ ಅಭಿವೃದ್ಧಿಗಾಗಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಮದುವೆ ಹಾಗೂ ಶುಭ ಸಮಾರಂಭಗಳಿಗೆ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಸರಳ ಸಜ್ಜನಿಕೆಯ ವ್ಯಕ್ತಿ. ಈ ಭಾಗಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ. ಸಂಸದರ ನಿಧಿಯನ್ನು ಸಮರ್ಪಕವಾಗಿ ವಿನಿಯೋಗಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅವರನ್ನು ಹೆಚ್ಚಿನ ಮತ ನೀಡುವ ಮೂಲಕ ಸಂಸತ್‌ ಮತ್ತೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಕೋರಿದರು.ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ‘ಭವನ ನಿರ್ಮಾಣಕ್ಕೆ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್‌ ಸದಸ್ಯರ ನಿಧಿಯಿಂದ ಅನುದಾನ ನೀಡಲಾಗಿದೆ. ಈ ಅನುದಾನ ಬಳಸಿಕೊಂಡು ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಕ್ಷೀರಭಾಗ್ಯ, ಬಿಸಿಯೂಟ, ಬೈಸಿಕಲ್, ಸಮವಸ್ತ್ರ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಪಡೆದುಕೊಂಡು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪಿ. ಮಹಾಲಿಂಗಸ್ವಾಮಿ, ಉಪಾಧ್ಯಕ್ಷೆ ಪಾರ್ವತಮ್ಮ, ಕಾರ್ಯ ನಿರ್ವಹಣಾಧಿಕಾರಿ ಬೋರಯ್ಯ, ತಹಶೀಲ್ದಾರ್ ಮಹದೇವು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.