ಯಾದಗಿರಿ: ಅತೀ ಹೆಚ್ಚು ಚುನಾವಣಾ ವೆಚ್ಚ ಮಾಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳ ಬಗ್ಗೆ ತೀವ್ರ ನಿಗಾ ಇಡುವಂತೆ ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಬೀಜು ಥಾಮಸ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ವೆಚ್ಚಕ್ಕೆ ಸಂಬಂಧಪಟ್ಟಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಲೋಕಸಭಾ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ನಿಗದಿಪಡಿಸಿರುವ ವೆಚ್ಚದಂತೆ ಹಣವನ್ನು ಅಭ್ಯರ್ಥಿಗಳು ಖರ್ಚು ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿಯ ಚುನಾವಣೆಗಾಗಿ ಅಭ್ಯರ್ಥಿಗಳ ವೆಚ್ಚದ ಮಿತಿಯನ್ನು ₨ 70 ಲಕ್ಷಕ್ಕೆ ಏರಿಸಲಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಖರ್ಚು–ವೆಚ್ಚಗಳನ್ನು ದಾಖಲಿಸಿ, ಕಾಲಕಾಲಕ್ಕೆ ವರದಿ ಕಳುಹಿಸಬೇಕು. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ ಬಳಕೆ ಮತ್ತು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಾತರಿಪಡಿಸಿಕೊಂಡು, ಈ ಕುರಿತು ಸಾಕ್ಷಿಗಾಗಿ ವಿಡಿಯೋ ರಿಕಾರ್ಡಿಂಗ್ ಮಾಡಿಕೊಳ್ಳಬೇಕು. ಪರಿಸ್ಥಿತಿಗೆ ಅನುಗುಣವಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಈಗಾಗಲೇ ನೇಮಿಸಲಾಗಿರುವ ಎಂ.ಸಿ.ಸಿ. ತಂಡಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್ಗಳು, ವಿಡಿಯೋ ಸರ್ವಲನ್ಸ್, ವಿಡಿಯೋ ವಿವಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು. ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಎಫ್.ಆರ್.ಜಮಾದಾರ್ ಮಾತನಾಡಿ, ಈಗಾಗಲೇ ನೇಮಿಸಿರುವ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಚುನಾವಣಾ ಅಭ್ಯರ್ಥಿಗೆ ಮತ್ತು ತಾರೆಯರ ಪ್ರಚಾರಕ್ಕಾಗಿ ಚುನಾವಣಾ ಆಯೋಗದಿಂದ ನಿಗದಿಪಡಿಸಿರುವ ವೆಚ್ಚದ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಅಕ್ರಮವಾಗಿ ಬಳಸಲಾಗುತ್ತಿರುವ ಹಣದ ಬಗ್ಗೆ ಸಂಪೂರ್ಣ ಸಾಕ್ಷ್ಯ ಸಂಗ್ರಹಿಸಬೇಕು. ಅಭ್ಯರ್ಥಿಗಳ ಪ್ರಚಾರಕ್ಕಾಗಿ ಅಥವಾ ಲಂಚಕ್ಕಾಗಿ ಈ ಹಣ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗುತ್ತಿದೆಯೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಹೇಳಿದರು.

ವಿವಿಧ ಬ್ಯಾಂಕುಗಳ ಮೂಲಕ ನಡೆಯುತ್ತಿರುವ ಬೃಹತ್ ಪ್ರಮಾಣದ ಹಣಕಾಸಿನ ವ್ಯವಹಾರಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮತ್ತು ಈ ಕುರಿತು ವರದಿ ನೀಡುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳಿಂದ ಆಗುವ ವೆಚ್ಚಗಳ ಬಗ್ಗೆ ಅಧಿಕೃತ ಮಾಹಿತಿ ನಮೂದಿಸಿದಲ್ಲಿ ಚುನಾವಣಾ ಕಾರ್ಯಕ್ಕೆ ಸಹಕಾರಿಯಾಗುತ್ತದೆ. ವಸ್ತು ನಿಷ್ಠ ವೆಚ್ಚವನ್ನು ನಮೂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಮತದಾನವಾಗಿರುವ ಸ್ಥಳಗಳನ್ನು ಈಗಾಗಲೇ ಗುರುತಿಸಿದ್ದು, ಅಂತಹ ಸ್ಥಳಗಳಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗುವಂತೆ ಗಮನಹರಿಸಲು ತಹಸೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎ.ಜಿಲಾನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಸಹಾಯಕ ಚುನಾವಣಾಧಿಕಾರಿಗಳು, ಸಹಾಯಕ ವೆಚ್ಚ ವೀಕ್ಷಕರು, ಚುನಾವಣೆಗೆ ನೇಮಿಸಿದ ವಿವಿಧ ತಂಡಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.