ಭಾನುವಾರ, ಜೂನ್ 13, 2021
21 °C

‘ಅರವಿಂದ್‌ ಬದುಕಿಗೆ ತಿರುವು ನೀಡಿದ ಗೆಲುವು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ‘ಜರ್ಮನ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವುದು ಅರವಿಂದ್‌ ಭಟ್‌ ಅವರ ಅಂತರರಾಷ್ಟ್ರೀಯ ವೃತ್ತಿ ಬದುಕಿಗೆ ಹೊಸ ತಿರುವು ನೀಡಿದೆ’ ಎಂದು ರಾಷ್ಟ್ರೀಯ ಮುಖ್ಯ ಕೋಚ್‌ ಪುಲ್ಲೇಲಾ ಗೋಪಿಚಂದ್‌ ಅಭಿಪ್ರಾಯಪಟ್ಟಿದ್ದಾರೆ.



‘ಇದು ಅಮೋಘ ಗೆಲುವು. ನನ್ನ ಪ್ರಕಾರ ಈ ಗೆಲುವು ಪುರುಷರ ಸಿಂಗಲ್ಸ್‌ನಲ್ಲಿ ಮೂಡಿಬಂದ ಅತ್ಯುತ್ತಮ ಗೆಲುವುಗಳಲ್ಲಿ ಒಂದು. ಟೂರ್ನಿಯ ಗುಣಮಟ್ಟ ಅತ್ಯುತ್ತಮವಾಗಿತ್ತು. ಈ ಟೂರ್ನಿಯಲ್ಲಿ ಅರವಿಂದ್‌ ಅವರ ಪ್ರದರ್ಶನ ಅದ್ಭುತವಾಗಿತ್ತು’ ಎಂದು ಗೋಪಿಚಂದ್‌ ಹೇಳಿದ್ದಾರೆ.



ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಅರವಿಂದ್‌ ಸಿಂಗಲ್ಸ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು. ಕಶ್ಯಪ್‌, ಅರುಂಧತಿ ಪಂಥವಾನೆ ಸೇರಿದಂತೆ ಪ್ರಮುಖ ಆಟಗಾರರು ಪಾಲ್ಗೊಂಡಿ ದ್ದರೂ, ಅರವಿಂದ್‌ ಎಲ್ಲರಿಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.