ಉಡುಪಿ: ಬಿಪಿಎಲ್ ಕಾರ್ಡ್ ವಿತರಣೆ ಯಲ್ಲಿ ಆಗುತ್ತಿರುವ ಲೋಪಗಳನ್ನು ಸರಿಪಡಿಸಿ ಅರ್ಹರಿಗೆ ಆದಷ್ಟು ಬೇಗ ಕಾರ್ಡ್ ವಿತರಣೆ ಮಾಡಿ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿ ರುವ ತಾಲ್ಲೂಕಿನ 1,566 ಮಂದಿಗೆ ಈ ವರೆಗೂ ಕಾರ್ಡ್ ಸಿಕ್ಕಿಲ್ಲ. ಆದ್ದರಿಂದ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಅವರಿಗೆ ಸಾಧ್ಯವಾಗುತ್ತಿಲ್ಲ. ವಿತರಣೆಯಾಗಿರುವ ಕೆಲವು ಕಾರ್ಡ್ಗಳು ದೋಷಪೂರಿತವಾಗಿವೆ. ಅದಾಲತ್ಗ ಳನ್ನು ಮಾಡುವ ಮೂಲಕ ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ. 94ಸಿ ಅನ್ವಯ ಸಲ್ಲಿಕೆಯಾದ ಅರ್ಜಿಗಳನ್ನು ತಕ್ಷಣ ವಿಲೇ ವಾರಿ ಮಾಡಲು ತಾಕೀತು ಮಾಡಿದರು.

ವಸತಿ ರಹಿತರಿಗೆ ನಿವೇಶನ ನೀಡು ವುದು ಆದ್ಯತೆಯಾಗಬೇಕು. ಇದಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾ ರಿಗಳ ಸಭೆಯನ್ನು 15 ದಿನಗಳ ಒಳಗೆ ನಡೆಸಿ. ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ. ಮಂಜೂರಾಗಿ ನಾನಾ ಕಾರಣ ಗಳಿಂದ ಸ್ಥಗಿತಗೊಂಡಿರುವ ಮನೆಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ ಎಂದರು. ಮತ್ಸ್ಯಾಶ್ರಯ ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ತಯಾರಿಸಿ ನೀಡಿ ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ನಿರ್ದಿಷ್ಟವಾದ ಹಾಸ್ಟೆಲ್ವೊಂದರಲ್ಲಿ ಸೀಟುಗಳು ಭರ್ತಿಯಾದರೆ ಖಾಲಿ ಇರುವ ಹಾಸ್ಟೆಲ್ಗಳಿಗೆ ಉಳಿದ ವಿದ್ಯಾರ್ಥಿಗಳನ್ನು ದಾಖಲಿಸಿ. ಹಾಸ್ಟೆಲ್ ಸಮಸ್ಯೆ ಬಗೆಹರಿ ಸಲು ಪ್ರಯತ್ನ ಮುಂದುವರೆದಿದೆ. ಹಿರೇ ಬೆಟ್ಟುವಿನಲ್ಲಿ ₨1.5 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ ಎಂದು ಹೇಳಿದರು.

ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡ ಲಾಗಿದೆ. ಯಾವುದಕ್ಕೂ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕುಮಾರ್, ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷೆ ವೇರೋನಿಕಾ ಕರ್ನೇಲಿಯೋ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.