ಶುಕ್ರವಾರ, ಜೂನ್ 25, 2021
30 °C

‘ಒಂದು ಮತ..ಒಂದು ಸ್ಥಾನವೂ ಮುಖ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮತ ಮತ್ತು ಒಂದು ಸ್ಥಾನಕ್ಕೂ ಮಹತ್ವ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಮನವಿ ಮಾಡಿದರು.ದೇಶದಲ್ಲಿ ಬದಲಾವಣೆ ತರುವ ಸಲುವಾಗಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಅವರು ರ್‍ಯಾಲಿಯಲ್ಲಿ ಪ್ರತಿಪಾದಿಸಿದರು.‘1998ರಲ್ಲಿ ಒಂದು ಸ್ಥಾನ ಕೊರತೆ ಬಿದ್ದುದರಿಂದ ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರ ಪತನವಾಯಿತು. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷದ ಎ.ಆರ್.ಕೃಷ್ಣಮೂರ್ತಿ ಕೇವಲ ಒಂದು ಮತದಿಂದ ಪರಾಭವಗೊಂಡರು. ಹೀಗಾಗಿ ಒಂದೊಂದು ಮತವೂ ಅಭ್ಯರ್ಥಿಯ ಹಣೆಬರಹವನ್ನು ನಿರ್ಧರಿಸುತ್ತದೆ’ ಎಂದರು.‘ಇದು ಸಂಕ್ರಮಣ ಕಾಲ. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು. ರಾಜ್ಯದ ಪ್ರತಿ ಮನೆಯಲ್ಲೂ ಮೋದಿ ಜಪ ನಡೆಯಬೇಕು. ಬಿಜೆಪಿಗೆ 272ಕ್ಕೂ ಅಧಿಕ ಸ್ಥಾನಗಳು ಲಭಿಸಬೇಕು ಎಂಬುದಾಗಿ ಪ್ರಾರ್ಥಿಸಿ’ ಎಂದೂ ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.