ಶುಕ್ರವಾರ, ಜನವರಿ 24, 2020
20 °C

‘ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಾಗರಿಕ ಸೌಲಭ್ಯ ಸಿಗುವ ಗುರುತರವಾದ ಹೊಣೆಗಾರಿಕೆ ಸರ್ಕಾರಿ ನೌಕರರ ಮೇಲೆ ಇದೆ ಎಂದು ಉಪವಿಭಾಗಾಧಿಕಾರಿ ಡಾ. ಬಿ. ಉದಯಕುಮಾರ್ ಶೆಟ್ಟಿ ಹೇಳಿದರು.ಇಲ್ಲಿನ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಸರ್ಕಾರಿ ನೌಕರರು ಇರುವ  ಘನತೆಯೊಂದಿಗೆ ಉತ್ತಮ ಕರ್ತವ್ಯ ನಿರ್ವಹಣೆ  ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.  ವಿಶೇಷ ಉಪನ್ಯಾಸ ನೀಡಿದ ಹಲಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆ.ದಿನೇಶ್ ಜಾಗತೀಕರಣ, ಆಧುನೀಕರಣ, ಖಾಸಗೀಕರಣದ ಹೊಡೆತಕ್ಕೆ ಜಗತ್ತಿನ ಬಹುತೇಕ ನೆಲಮೂಲ ಭಾಷೆಗಳು ನೇಪಥ್ಯಕ್ಕೆ ಸರಿಯುತ್ತಿವೆ. ಸಂಸ್ಕೃತಿಯೊಂದನ್ನು ಪ್ರತಿನಿಧಿಸುವ ಭಾಷೆಯನ್ನು ಸಾಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದರು.ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರಿಯಿಂದ ನಿವೃತ್ತರಾದವರಿಗೆ  ಸನ್ಮಾನಿಸಲಾಯಿತು.  ಎಸ್‌ ಎಸ್‌ ಎಲ್ ಸಿ, ಪಿಯುನಲ್ಲಿ ಹೆಚ್ಚು ಅಂಕ ಗಳಿಸಿದ ನೌಕರರ ಮಕ್ಕಳನ್ನು ಹಾಗೂ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕ್ರೀಡಾಸಾಧನೆ ಮೆರೆದ ಕ್ರೀಡಾಪಟುಗಳನ್ನು ಸನ್ಮಾನಿಸಲಾುತು. ಎಚ್.ಆರ್.ನಾಗಭೂಷಣ್ ಅಧ್ಯಕ್ಷತೆ ವಹಿಸಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಪಿ.ಬ್ಯಾನರ್ಜಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಚಂದ್ರಪ್ಪ, ರಾಜ್ಯ ಪರಿಷತ್ ಸದಸ್ಯ ನರಸಿಂಹಯ್ಯ, ತಾಲ್ಲೂಕು ಘಟಕದ ಗೌರವಾಧ್ಯಕ್ಷ ಎಂ.ಮೈಲಪ್ಪ, ಖಜಾಂಚಿ ವಿಜಯಕುಮಾರ್ ಇನ್ನಿತರರು ಹಾಜರಿದ್ದರು.

ಪ್ರತಿಕ್ರಿಯಿಸಿ (+)