‘ಕಪ್ಪಕಾಣಿಕೆ ಸಂಸ್ಕೃತಿ ನಮ್ಮದಲ್ಲ’

7

‘ಕಪ್ಪಕಾಣಿಕೆ ಸಂಸ್ಕೃತಿ ನಮ್ಮದಲ್ಲ’

Published:
Updated:

ರಾಮನಗರ: ಜಿಲ್ಲೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಜಿಲ್ಲಾಧಿಕಾರಿ ಅವರು 100 ಎಕರೆ ಜಾಗದ ಪ್ರಸ್ತಾವನೆಯನ್ನು ಸರ್ಕಾ ರಕ್ಕೆ ಕಳುಹಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಯಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಥ್ಲೆಟಿಕ್‌ ಕ್ರೀಡಾಕೂಟ (2013–14) ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಅವರು ಮಾತನಾಡಿದರು.ಪ್ರಜಾಪ್ರಭುತ್ವದಲ್ಲಿನ  ಅವಕಾಶಗಳನ್ನು ಕ್ರೀಡಾಪಟುಗಳು  ಸದುಪಯೋಗಪಡಿಸಿಕೊಂಡು ಕ್ರೀಡಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಬೇಕು ಎಂದು ಗೃಹ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. ಶಿಸ್ತು ಮತ್ತು ಕಠಿಣ ಪ್ರಯತ್ನದಿಂದ ಎಂತಹ ಸಾಧನೆಯನ್ನಾದರೂ ಮಾಡಬ ಹುದು ಎಂದರು.ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ, ಜಿ.ಪಂ ಸಿಇಒ ಡಾ. ಎಂ.ವಿ.ವೆಂಕಟೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗ್ರವಾಲ್‌, ಉಪ ವಿಭಾಗಾಧಿಕಾರಿ ಸ್ನೇಹಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಹ್ಲಾದ್‌ ಗೌಡ, ಜಿ.ಪಂ ಸದಸ್ಯೆ ಶಾಂತಮ್ಮ, ಕಾಂಗ್ರೆಸ್‌ ಮುಖಂಡ ಮರಿದೇವರು ಉಪಸ್ಥಿತರಿದ್ದರು.ಜಿಲ್ಲೆಯ ನಾಲ್ಕು ತಾಲ್ಲೂಕುಗಳ 250 ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.ಭ್ರಷ್ಟಾಚಾರ ರಹಿತ ಆಡಳಿತ

‘ಅಧಿಕಾರಿಗಳು ಮತ್ತಿತರರ ಬಳಿ ಕಪ್ಪಕಾಣಿಕೆ ಪಡೆಯುವುದು ಕಾಂಗ್ರೆಸ್‌ ಸರ್ಕಾರದ ಗುರಿಯಲ್ಲ. ಅದು ಹಿಂದೆ ಆಡಳಿತ ನಡೆಸಿದ್ದ ಜೆಡಿಎಸ್‌ನ ಗುರಿ ಇರಬಹುದು. ಆದರೆ ಅದಕ್ಕೆ ನಮ್ಮ ಸರ್ಕಾರದಲ್ಲಿ ಅವಕಾಶ ಇಲ್ಲ. ನಾವು ಜನರಿಗೆ ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ ನಡೆಸುವ ಗುರಿ ಹೊಂದಿದ್ದೇವೆ’ ಎಂದರು.‘ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದಾಗ ಅವರ ಸಮಸ್ಯೆ ಪರಿಹರಿಸಲು ಸ್ಪಂದಿಸಬೇಕಾದದ್ದು ಅಧಿಕಾರಿಗಳ ಕರ್ತವ್ಯ. ಅದನ್ನು ಬಿಟ್ಟು ಕಾಂಗ್ರೆಸ್‌ ಕಾರ್ಯಕರ್ತರಿಗೆ ಮಾತ್ರ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಆಗುತ್ತಿದೆ ಎಂಬ ಆರೋಪ ಸರಿಯಲ್ಲ. ಎಲ್ಲ ಸಾರ್ವ ಜನಿಕರ ಕೆಲಸಗಳು ಸರ್ಕಾರಿ ಕಚೇರಿ ಗಳಲ್ಲಿ ಆಗುತ್ತವೆ’ ಎಂದು ಸಚಿವರು ಉತ್ತರಿಸಿದರು.ಪ್ರಬಲರಿದ್ದರೂ ನೀರಿನ ಸಮಸ್ಯೆ

‘ಜಿಲ್ಲೆಯಲ್ಲಿ ಪ್ರಬಲ ನಾಯಕರು ಜನಪ್ರತಿನಿಧಿಗಳಾಗಿ ಆಯ್ಕೆ ಆಗಿದ್ದರೂ ಇಲ್ಲಿನ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗದಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಅಧಿಕಾರಕ್ಕೆ ಬಂದು ಇನ್ನೂ ಮೂರು–ನಾಲ್ಕು ತಿಂಗಳಾಗಿದೆ. ಹಂತ ಹಂತವಾಗಿ ಕುಡಿಯುವ ನೀರು ಸೇರಿದಂತೆ ಉಳಿದ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ’ ಅವರು ಹೇಳಿದರು.ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯ ಕ್ರಮಗಳಲ್ಲಿ ಶಿಷ್ಟಾಚಾರ ಪಾಲನೆ ಆಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳ ಬೇಕಾದದ್ದು ಜಿಲ್ಲಾಧಿಕಾರಿ ಜವಾಬ್ದಾರಿ ಎಂದ ಅವರು ಪಕ್ಕದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಅವರಿಗೆ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ನೋಡಿಕೊಳ್ಳು ವಂತೆ ಸೂಚಿಸಿದರು.ಒಂದಂಕಿ ಲಾಟರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗ್ರವಾಲ್‌ ಅವರಿಗೆ ಈ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry