ಮಂಗಳವಾರ, ಮಾರ್ಚ್ 9, 2021
31 °C
ಸುದ್ದಿ 2 ನಿಮಿಷ

‘ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದಿದ್ದರೆ ಹೋರಾಟ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದಿದ್ದರೆ ಹೋರಾಟ’

ಶಿವಮೊಗ್ಗ: ವಿಧಾನಮಂಡಲದ ಮುಂಗಾರು ಅಧಿವೇಶನದೊಳಗೆ ಕಬ್ಬು ಬೆಳೆಗಾರರಿಗೆ ಬಾಕಿ ಮೊತ್ತ ಪಾವತಿಸಬೇಕು. ಇಲ್ಲದಿದ್ದರೇ ಈ ವಿಷಯ ಮುಂದಿಟ್ಟುಕೊಂಡು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಅಧಿವೇಶನದಲ್ಲಿ ಬಾಕಿ ಮೊತ್ತ ಪಾವತಿಗೆ ಕ್ರಮಕೈಗೊಳ್ಳುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ ಈ ಭರವಸೆ ಹುಸಿಯಾಗಿದೆ. ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡುವಂತೆ ಹಾಗೂ ಹಣ ಕೊಡದೆ ಇರುವ ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕುವಂತೆ ಸುತ್ತೋಲೆಯನ್ನೂ ಹೊರಡಿಸಲಾಗಿತ್ತು. ಆದರೆ ಈ ಬಗ್ಗೆ ಸಹಕಾರ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.ಕೇಂದ್ರ ಸರ್ಕಾರ ಸುಮಾರು ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ₨ 6 ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಅದನ್ನು ಬಳಸಿಕೊಂಡು ಬೆಳೆಗಾರರ ಹಿತ ಕಾಯಬೇಕಿದ್ದ ರಾಜ್ಯ ಸರ್ಕಾರ ಅವರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.