‘ಕರ್ನಾಟಕ ದರ್ಶನ’ಕ್ಕೆ ಚಾಲನೆ

ಆನೇಕಲ್: ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ವೇಳೆಯಲ್ಲಿ ಪಡೆದ ಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ರಾಮಮೂರ್ತಿ ನುಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಕರ್ನಾಟಕ ದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಸಂಯೋಜಕ ವಿ.ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಕೆ.ಗವಿರಂಗಯ್ಯ, ಪ್ರಧಾನ ಕಾರ್ಯದರ್ಶಿ ಆರ್.ಶ್ರೀನಿವಾಸ್ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.