ಗದಗ: ದೇಶದ ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರ ನಡೆಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಷಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಬಿಜೆಪಿ ಮಹಾ ಸಂರ್ಪಕ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಯೋಜನೆ ರೂಪಿಸಲಿಲ್ಲ. 25 ವರ್ಷ ಸ್ವಾತಂತ್ರ್ಯದ ಹೆಸರಲ್ಲಿ ದೇಶ ಆಳಿದರು. ನಂತರ ಮುಖಂಡರು ಇಂದಿರಾ ಗಾಂಧಿ ಮತ್ತು ರಾಜೀವ ಗಾಂಧಿ ಬೂದಿ ತೆಗೆದುಕೊಂಡು ಓಡಾಡಿದರು. ಕೆಲಸ ಮಾಡಿದ್ದೇವೆ ಮತ ಹಾಕಿ ಅಂತ ಎಂದೂ ಕೇಳಲಿಲ್ಲ. 67 ವರ್ಷದ ಇತಿಹಾಸದಲ್ಲಿ ಬೇಗ ನಿರ್ಧಾರ ತೆಗೆದುಕೊಂಡು ಅಧಿಕಾರ ನಡೆಸುತ್ತಿರುವುದು ಮೋದಿ ಸರ್ಕಾರ ಎಂದು ಹೆಮ್ಮೆಯಿಂದ ಹೇಳಬಹುದು ಎಂದು ಅವರು ಹೇಳಿದರು.

ಭೂ ಸ್ವಾಧೀನ ಮಸೂದೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ತಿದ್ದುಪಡಿ ಮಸೂದೆಯಲ್ಲಿ ರೈತರಿಗೆ ನಾಲ್ಕು ಪಟ್ಟು ಪರಿಹಾರ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ಆರವತ್ತು ವರ್ಷ ಕಳೆದರೂ ಕುಡಿಯಲು ನೀರಿಲ್ಲ. 21 ಸಾವಿರ ಹಳ್ಳಿಗಳಲ್ಲಿ ಫ್ಲೋರೈಡ್ಯುಕ್ತ ನೀರನ್ನು ಕುಡಿಯುತ್ತಿದ್ದಾರೆ. ಗದಗ ಜಿಲ್ಲೆಯಲ್ಲಿ ತಿಂಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಕಾಂಗ್ರೆಸ್ನವರಿಗೆ ಮುಖ ತೋರಿಸಲು ನಾಚಿಕೆ ಆಗಬೇಕು. ಶಾಲೆ, ವಿದ್ಯುತ್, ನೀರು ಕೊಡಲು ಆಗಲಿಲ್ಲ ಎಂದು ವ್ಯಂಗ್ಯವಾಡಿದರು.

ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಲ್ ಸೈನ್ಸ್ ನಡೆಸಿದ ಸಮೀಕ್ಷೆಯಲ್ಲಿ ದೇಶದ ಶೇಕಡಾ 50ರಷ್ಟು ಕೃಷಿಕರು ಬೇರೆ ಉದ್ಯೋಗ ದೊರೆತೆರೆ ಕೃಷಿ ಬಿಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಕಾರಣ ವಿದ್ಯುತ್, ಶಾಲೆ ಇಲ್ಲದಿರುವುದು. ಕಾಂಗ್ರೆಸ್ ದಿನಕ್ಕೆ 2 ಕಿ.ಮೀ. ರಸ್ತೆ ನಿರ್ಮಾಣ ಮಾಡಿದರೆ, ಬಿಜೆಪಿ 12 ಕಿ.ಮೀ. ರಸ್ತೆ ನಿರ್ಮಿಸುತ್ತಿದೆ. ಮುಂದಿನ ದಿನಗಳಲ್ಲಿ 20 ಕಿ.ಮೀ. ರಸ್ತೆ ನಿರ್ಮಿಸುವ ಗುರಿ ಇದೆ ಎಂದರು.

ತೆಲಗಿ ಹಗರಣಕ್ಕಿಂತ ದೊಡ್ಡದ್ದು ಲಾಟರಿ ದಂಧೆ. ಲಾಟರಿ ದಂಧೆ ಬಗ್ಗೆ ಹಿಂದೆಯೇ ಸಿಬಿಐ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಅದನ್ನು ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು ಆರ್ಶಿರ್ವಾದ ಇಲ್ಲದೆ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜನತೆ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಸಚಿವ ಎಚ್.ಕೆ.ಪಾಟೀಲರು ಮತ ಎಣಿಕೆ ಇನ್ನೂ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೆಚ್ಚಿಸಲು ಶೇಕಡಾ 80ರಷ್ಟು ಜನತೆ ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂಬ ಸುಳ್ಳು ಹೇಳಿಕೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಸಚಿವರನ್ನು ನಂಬುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಿ.ಸಿ.ಪಾಟೀಲ, ಕಳಕಪ್ಪ ಬಂಡಿ, ಮಾಜಿ ಶಾಸಕರಾದ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ, ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಾಂತವ್ವ ದಂಡಿನ, ಉಪಾಧ್ಯಕ್ಷೆ ಸುನಿತಾ ಹಳೆಯಪ್ಪನವರ ಹಾಜರಿದ್ದರು.

ಗ್ರಾಂ ಪಂ. ಚುನಾವಣೆಯಲ್ಲಿ ಶೇಕಡಾ 53ರಷ್ಟು ಜನರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿದ್ದಾರೆ ಎಂಬುದನ್ನು ಮರೆ ಮಾಚಲಾಗಿದೆ.
ಪ್ರಹ್ಲಾದ ಜೋಷಿ, ರಾಜ್ಯ ಬಿಜೆಪಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.