ಹಾಸನ: ‘ಲೋಕಸಭಾ ಚುನಾವಣೆಯ ಬಳಿಕ ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಿದ್ಧತೆ ನಡೆಸಿದ್ದಾರೆ. ಆದರೆ, ಅಂಥವರಿಗೆ ಕಾಂಗ್ರೆಸ್ನ ಬಾಗಿಲು ಸದಾ ಮುಚ್ಚಿರುತ್ತದೆ’ ಎಂದು ಹಾಸನ ಕ್ಷೇತ್ರದ ಘೋಷಿತ ಅಭ್ಯರ್ಥಿ ಎ. ಮಂಜು ತಿಳಿಸಿದರು.

ಹಾಸನ ಲೋಕಭಾ ಕ್ಷೇತ್ರದಿಂದ ಶಾಸಕ ಎ. ಮಂಜು ಅವರನ್ನು ಕಣಕ್ಕೆ ಇಳಿಸುವುದಾಗಿ ಕಾಂಗ್ರೆಸ್ ಘೋಷಿಸಿದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯವನ್ನು ಹೇಳಿದರು.

ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಅವರು ಸಭೆಯಲ್ಲಿ ಈ ವಿಷಯವನ್ನು ಮೊದಲು ಪ್ರಸ್ತಾಪ ಮಾಡಿ, ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರ ಅಕ್ಕಪಕ್ಕದಲ್ಲಿ ಕಾಣಿಸಿಕೊಳ್ಳುವ ಪ್ರಯತ್ನವನ್ನು ರೇವಣ್ಣ ಮಾಡುತ್ತಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಂಭವವಿದೆ ಎಂದು ಹೇಳಿದರು.

ಎಚ್.ಡಿ. ದೇವೇಗೌಡ ಅವರು ಈ ಚುನಾವಣೆಯಲ್ಲಿ ಸೋಲುವುದು ಖಚಿತ. ಅವರು ಸೋಲುತ್ತಿದ್ದಂತೆ ಅವರ ಒಬ್ಬ ಪುತ್ರ ಬಿಜೆಪಿಗೆ ಹಾಗೂ ಇನ್ನೊಬ್ಬ ಪುತ್ರ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ’ ಎಂದು ತಿಳಿಸಿದರು.

ಅವಕಾಶ ನೀಡಬಾರದು: ಇದನ್ನು ಬೇರೆ ರೀತಿಯಿಂದ ವಿಶ್ಲೇಷಿಸಿದ ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಶಿವರಾಮು, ‘ಹಾಸನದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸುವಂಥ ನಾಯಕರೇ ಇಲ್ಲ ಎಂಬ ಭಾವನೆ ಕಾಂಗ್ರೆಸ್ನ ಕೆಲವು ಮುಖಂಡರಲ್ಲೂ ಮೂಡಿದೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಅದನ್ನೇ ಆಧಾರವನ್ನಾಗಿಟ್ಟುಕೊಂಡು ರೇವಣ್ಣ ಅವರು ಗೆಲ್ಲುವ ಅಭ್ಯರ್ಥಿ ಎಂದು ಭಾವಿಸಿ ಪಕ್ಷಕ್ಕೆ ಸೇರಿಸುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ನೀಡಬಾರದು. ಎಲ್ಲರೂ ರಾತ್ರಿ– ಹಗಲು ದುಡಿದು ಮಂಜು ಅವರನ್ನು ಗೆಲ್ಲಿಸಲೇಬೇಕು’ ಎಂದರು.

‘ರೇವಣ್ಣ ಕಾಂಗ್ರೆಸ್ ಸೇರುವ ಪ್ರಯತ್ನ ಮಾಡಿದ್ದಾರೆ ಎಂಬುದು ಊಹಾಪೋಹವಲ್ಲ, ಈ ಬಗ್ಗೆ ಈಗಾಗಲೇ ಮೂರು ಸುತ್ತಿನ ಮಾತುಕತೆಯಾಗಿದೆ. ಎಲ್ಲಿ, ಯಾವಾಗ ಎಂದು ಹೇಳಲು ಇದು ಸಕಾಲವಲ್ಲ. ಅವರಿಗೆ ಕಾಂಗ್ರೆಸ್ ಬಾಗಿಲು ಮುಚ್ಚುವಂತಾಗಬೇಕಾದರೆ ಮಂಜು ಗೆಲುವು ಅನಿವಾರ್ಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.