ಭಾನುವಾರ, ಜೂನ್ 13, 2021
21 °C

‘ಕಾಲುವೆಗೆ ನೀರು ಹರಿಸದಿದ್ದರೇ ಹೋರಾಟ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸಗಿ: ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ ನೀರು ಸ್ಥಗಿತ­ಗೊಳಿಸಿ­ದ್ದರಿಂದ ಬಹುತೇಕ ರೈತರಿಗೆ ತೊಂದರೆ­ಯಾಗುತ್ತಿದೆ. ತಕ್ಷಣದಿಂದಲೇ ಕಾಲು­ವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಮಾಜಿ ಸಚಿವ ನರಸಿಂಹನಾಯಕ(ರಾಜುಗೌಡ) ತಿಳಿಸಿದ್ದಾರೆ.ಮಾರ್ಚ್‌ ಅಂತ್ಯದವರೆಗೆ ನೀರು ಕೊಡು­ವುದಾಗಿ ಹೇಳಿ ಅಧಿಕಾರ ಹಿಡಿದಿ­ರುವ ಜನಪ್ರತಿನಿಧಿಗಳು ಈಗ ಮಾಡಿದ್ದು ಏನು? ಎಂದು ಪ್ರಶ್ನಿಸಿರುವ ಅವರು, ಹಿಂದೆ ಪಾದಯಾತ್ರೆ ಮಾಡಿದವರು ಈಗೇನು ಮಾಡುತ್ತಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ನೀರಿಗಾಗಿ ಹೋರಾಟ ಮಾಡುತ್ತೇನೆ ಎನ್ನುವುದು ನಾಚಿಕೆ­ಗೇಡಿನ ಸಂಗತಿ ಎಂದು ಹೇಳಿದ್ದಾರೆ.ಕಳೆದ ವರ್ಷ ತಾವು ಸಚಿವ­ರಾಗಿದ್ದಾಗ ಆಗಿನ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವ­ರೊಂದಿಗೆ ಮಾತನಾಡಿ ರೈತರಿಗೆ ನೀರು ಒದಗಿಸಲಾಗಿತ್ತು. ಆದರೆ, ಈ ವರ್ಷ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ಕಾಲುವೆಗೆ ನೀರು ಸ್ಥಗಿತ­ಗೊಳಿಸಿರುವುದರ ಹಿಂದಿನ ಹುನ್ನಾರ­ವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.ಕೃಷ್ಣಾ ಭಾಗ್ಯ ಜಲ ನಿಗಮದ ಹಿರಿಯ ಅಧಿಕಾರಿಗಳು ತಕ್ಷಣವೇ ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಾ­­ಗುವ ಅನಾಹುತಗಳಿಗೆ ಅವರೇ ಹೊಣೆ ಎಂದು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.