ಸೋಮವಾರ, ಮಾರ್ಚ್ 27, 2023
23 °C

‘ಕಾಶ್ಮೀರಿಗಳ ಹೃದಯ ಗೆಲ್ಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕಾಶ್ಮೀರಿಗಳ ಹೃದಯ ಗೆಲ್ಲಿ’

ನವದೆಹಲಿ: ‘ಕಾಶ್ಮೀರದ ಜನರ ಹೃದಯ ಗೆಲ್ಲಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆರಂಭಿಸಿದ್ದ ಮಾತುಕತೆ ಪ್ರಕ್ರಿಯೆಯನ್ನು ಮುಂದುವರಿಸಬೇಕು’ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದಾರೆ.



ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಭಾಲ್ ಜತೆ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಸ್ಥಿತಿಯ ಪರಾಮರ್ಶೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರಧಾನಿ ಜನರ ಜತೆ ಮಾತನಾಡಿ ಅವರ ಸಮಸ್ಯೆ ಆಲಿಸಬೇಕು ಮತ್ತು ಜನರ ಹೃದಯ ಗೆಲ್ಲಲು ಕೆಲವು ತುರ್ತು ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.



‘ಕಾಶ್ಮೀರದಲ್ಲಿರುವವರು ನಮ್ಮ ಜನರು, ಮಾತುಕತೆ ನಡೆಸಿದರೆ ಅಲ್ಲಿನ ಪರಿಸ್ಥಿತಿ ಸುಧಾರಿಸುತ್ತದೆ’ ಎಂದು ಅವರು ಹೇಳಿದರು.



ಗಲಭೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ, ಭದ್ರತಾ ಸಿಬ್ಬಂದಿ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ನಾವು ಕ್ರಮ ತೆಗೆದುಕೊಳ್ಳದಿದ್ದರೆ ಸಾವು–ನೋವುಗಳು ಇನ್ನಷ್ಟು ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.