‘ಕುಡಿಯುವ ನೀರಿಗೆ ಹೆಚ್ಚಿನ ಹಣ ನೀಡಿ’

7

‘ಕುಡಿಯುವ ನೀರಿಗೆ ಹೆಚ್ಚಿನ ಹಣ ನೀಡಿ’

Published:
Updated:

ಹಿರೀಸಾವೆ: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಜನವರಿಯಲ್ಲಿಯೇ  ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಸರ್ಕಾರವು ಕುಡಿಯುವ ನೀರು ಯೋಜನೆಗೆ ಹೆಚ್ಚು ಹಣ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಕೃಷ್ಣ ಹೇಳಿದರು.ಹೋಬಳಿಯ ಹೊನ್ನಮಾರನಹಳ್ಳಿಯಲ್ಲಿ ಎಸ್‌ಸಿಪಿ ಯೋಜನೆಯ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ ಎಂದರು. ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಬರಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು  ಹೆಚ್ಚುವರಿಯಾಗಿ ₨ 2 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದರು.ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಶಿಲ್ಪಾ ಶ್ರೀನಿವಾಸ್, ಬಾಳಗಂಚಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ಹೊನ್ನೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಜಿ. ರಾಮಕೃಷ್ಣ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry