ಶುಕ್ರವಾರ, ಮಾರ್ಚ್ 5, 2021
30 °C
ಸನ್ನಡತೆ ಹೊಂದಿದ 35 ಕೈದಿಗಳ ಬಿಡುಗಡೆ; ಕುಟುಂಬದವರ ಹರ್ಷ

‘ಕುಹಕ ನುಡಿಗೆ ಕಿವಿಗೊಡಬೇಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕುಹಕ ನುಡಿಗೆ ಕಿವಿಗೊಡಬೇಡಿ’

ಬೆಳಗಾವಿ: ‘ಜೈಲಿಗೆ ಹೋಗಿ ಬಂದವರು ಎಂಬ ಕೆಲವರ ಕುಹಕ ನುಡಿಗಳಿಗೆ ಕಿವಿಗೊಡಬೇಡಿ. ಸಮಾಜದ ಜತೆಗೆ ಹೊಂದಿಕೊಂಡು ಹೋಗಿ ಜೀವನ ರೂಪಿಸಿಕೊಳ್ಳಿ’ ಎಂದು ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಅಶೋಕ ನಿಜಗಣ್ಣವರ ಹೇಳಿದರು.ಇಲ್ಲಿಗೆ ಸಮೀಪದ ಹಿಂಡಲಗಾ ಕಾರಾಗೃಹದಲ್ಲಿ ಸನ್ನಡತೆ ತೋರಿದ 35 ಕೈದಿಗಳನ್ನು ಸ್ವಾತಂತ್ರ್ಯೋತ್ಸವದ ಅಂಗ­ವಾಗಿ ಬಿಡುಗಡೆಗೊಳಿಸಿದ ಸಮಾರಂಭ­ದಲ್ಲಿ ಅವರು ಮಾತನಾಡಿದರು.ಸಾಮಾಜಿಕ ಜೀವನದಲ್ಲಿ ಯಾರದ್ದೂ ಕಸಿಯಬಾರದು ಹಾಗೂ ಯಾರಿಗೂ ತೊಂದರೆ ಕೊಡಬಾರದು ಎಂಬ ನೀತಿ ಅನುಸರಿಸಿದರೆ ಒಳ್ಳೆಯ ಬದುಕು ಸಾಗಿಸಬಹುದು ಎಂದು ಅವರು ಹೇಳಿದರು.ಯಾವುದೋ ಕ್ಷಣದಲ್ಲಿ ಮಾಡಿದ ತಪ್ಪಿಗೆ ಬದುಕಿನ ಮಹತ್ವದ ಅವಧಿ­ಯನ್ನು ಕಾರಾಗೃಹದಲ್ಲಿ ಕಳೆಯಬೇಕಾ­ಯಿತು. ಇಲ್ಲಿ ಪಡೆದ ಸುಧಾರಣಾ ಕ್ರಮಗಳನ್ನು ಪಾಲಿಸಿ ಸಮಾಜಮುಖಿ­ಯಾಗಿ ಬದುಕಬೇಕು ಎಂದರು.ಜಿಲ್ಲಾಧಿಕಾರಿ ಎನ್‌. ಜಯರಾಮ್‌ ಮಾತನಾಡಿ, ಜೀವನದಲ್ಲಿ ಯಾರೂ ಪರಿಪೂರ್ಣರಲ್ಲ, ಕಲಿತು ಹೊಂದಿ­ಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಆರ್‌. ರವಿಕಾಂತೇಗೌಡ ಮಾತನಾಡಿ, ಜೈಲುಗಳು ಆತ್ಮಶೋಧನೆ ಕೇಂದ್ರ­ಗಳಾ­ಗಿವೆ. ಈಗ ಬಿಡುಗಡೆ­ಯಾದವರು ಉತ್ತಮ ಬದುಕು ನಡೆಸಬೇಕು ಎಂದರು.ಕಾರಾಗೃಹ ಸಲಹಾ ಸಮಿತಿ ಸದಸ್ಯ ವಿಜಯ ಮೋರೆ, ಇದೇ ಸನ್ನಡತೆಯನ್ನು ಜೀವನುದ್ದಕ್ಕೂ ಕಾಪಾಡಿಕೊಂಡು ಎಲ್ಲರ ಗೌರವಕ್ಕೆ ಪಾತ್ರರಾಗಬೇಕು ಎಂದು ಹೇಳಿದರು.ಪೊಲೀಸ್‌ ಆಯುಕ್ತ ಟಿ.ಜಿ. ಕೃಷ್ಣಭಟ್‌, ಮಾಜಿ ಮೇಯರ್‌ ಸಿದ್ದನಗೌಡ ಪಾಟೀಲ, ಕವಿತಾ ಕಾಂಬಳೆ ಇತರರು ಉಪಸ್ಥಿತರಿದ್ದರು.ಕಾರಾಗೃಹದ ಅಧೀಕ್ಷಕ ಟಿ.ಪಿ. ಶೇಷ ಮಾತನಾಡಿ, ಸನ್ನಡತೆಯ ಹೊಂದಿದ 43 ಕೈದಿಗಳ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 35 ಜನರಿಗೆ ಸರ್ಕಾರ ಬಿಡುಗಡೆಗೊಳಿಸಿದೆ, ಎಲ್ಲರೂ ಸನ್ನಡತೆಯಿಂದ ಬದುಕಿ, ಬಾಳಿ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.