‘ಕೊಳಗೇರಿ ನಿವಾಸಿಗಳ ಅಭಿವೃದ್ಧಿಗೆ ಬದ್ಧ’

7

‘ಕೊಳಗೇರಿ ನಿವಾಸಿಗಳ ಅಭಿವೃದ್ಧಿಗೆ ಬದ್ಧ’

Published:
Updated:

ಕೃಷ್ಣರಾಜಪುರ: ಕೊಳೆಗೇರಿ ನಿವಾಸಿಗಳಿಗೆ ನೀರು ಪೂರೈಕೆ, ರಸ್ತೆ ಅಭಿವೃದ್ಧಿ, ಪಡಿತರ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಒದಗಿಸಿದ್ದು, ನಿವಾಸಿಗಳ ಸರ್ವಾಂಗೀಣ ಅಭಿವೃದ್ಧಿಗೆ  ಸರ್ಕಾರ ಒತ್ತು ನೀಡುತ್ತದೆ ಎಂದು ಶಾಸಕ ಬೈರತಿ ಎ.ಬಸವರಾಜು ಹೇಳಿದರು.ಲಕ್ಷ್ಮಣಮೂರ್ತಿನಗರ ಕೊಳಗೇರಿ ಯಲ್ಲಿ ಯುವಕ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಎಲ್ಲ ಸೌಕರ್ಯಗಳನ್ನು ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಕೊಳೆಗೇರಿ ನಿವಾಸಿಗಳನ್ನು ಎತ್ತಂಗಡಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲ್ಕೆರೆ ಎಸ್‌.ನಾರಾಯಣಸ್ವಾಮಿ, ಹಿಂದುಳಿದ ವರ್ಗದ ಅಧ್ಯಕ್ಷ ದಾಮೋದರ್‌ ರಾಜು, ಅಂತೋನಿ ರಾಜು ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry