ಸವಣೂರು : ‘ಉತ್ತಮವಾದ ಸಾಧನೆಯ ಗುರಿ ಯೊಂದಿಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ತಾಲ್ಲೂಕಿನ ಶೈಕ್ಷಣಿಕ ಪ್ರಗತಿಯನ್ನು ದಾಖಲಿಸಲು ನಿಮ್ಮ ಕೊಡುಗೆಯನ್ನು ನೀಡಿ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣಪ್ಪ ಸುಣಗಾರ ತಿಳಿಸಿದರು.
ಸವಣೂರು ನಗರದ ಕಂದಾಯ ಇಲಾಖಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ವೃದ್ಧಿಸಿಕೊಳ್ಳಬೇಕು. ಸರಕಾರದ ಸೌಲಭ್ಯಗಳ ಸದುಪಯೋಗವಾಗಬೇಕು. ಗೆಲುವಿನ ಗುರಿಯೊಂದಿಗೆ ಮುನ್ನಡೆಯಬೇಕು. ಕ್ರೀಡಾಸ್ಫೂರ್ತಿ ಯೊಂದಿಗೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಸೂಚಿಸಿದರು. ಪಠ್ಯದೊಂದಿಗೆ ಪಠ್ಯಪೂರಕವಾದ ಚಟುವಟಿಕೆಗಳೂ ಮಕ್ಕಳನ್ನು ಶಿಕ್ಷಣದತ್ತ ಆಕರ್ಷಿಸುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಜಿ.ಪಂ.ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ , ಮಕ್ಕಳಿಗೆ ನೀಡಲಾಗುವ ಆರಂಭಿಕ ಶಿಕ್ಷಣದ ಗುಣಮಟ್ಟ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ನಿರ್ಧರಿಸುತ್ತದೆ. ಆರಂಭದಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಕಲಿಕೆಯಲ್ಲಿ ಅಭಿರುಚಿಯನ್ನು ಮೂಡಿಸುತ್ತದೆ ಎಂದರು.

ಕಲಿಕೆ ನಿರಂತರತವಾಗಿರಲಿ. ಪ್ರತಿಭಾ ಕಾರಂಜಿಯ ಮೂಲಕ ವ್ಯಕ್ತಿತ್ವದ ವಿಕಸನದೊಂದಿಗೆ, ಮಕ್ಕಳಲ್ಲಿ ನಾಯಕತ್ವದ ಗುಣ ವೃದ್ಧಿಸಲಿ. ಪಾಲಕರ ಪ್ರೋತ್ಸಾಹ ಹಾಗೂ ಶಿಕ್ಷಕರ ಮಾರ್ಗದರ್ಶನದ ಮೂಲಕ ಪ್ರತಿಯೊಂದು ಮಗುವೂ ತನ್ನ ಆಸಕ್ತಿಯ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲಿ ಎಂದು ಹಾರೈಸಿದರು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿ.ಪಂ.ಸದಸ್ಯೆ ಸಾವಿತ್ರಮ್ಮ ತಳವಾರ ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳಿಗೆ ಶುಭ ಹಾರೈಸಿದರು. ಜಿ.ಪಂ, ತಾ.ಪಂ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು.

ತಾ.ಪಂ.ಸದಸ್ಯರಾದ ಮಾಲತೇಶ ಬಿಜ್ಜೂರ, ಚಿದಾನಂದ ಬಡಿಗೇರ, ರುದ್ರಗೌಡ ಪಾಟೀಲ, ದೈಹಿಕ ಶಿಕ್ಷಣ ಸಂಯೊಜಕ ಎಸ್.ಜಿ ಕೋರಿ, ಶಿಕ್ಷಣ ಸಂಯೋಜಕರಾದ ಎಲ್.ಆರ್ ದಾಸರ, ಎಂ.ಬಿ ರಜಪೂತ, ಎಸ್.ಡಿ ತಿರಕಪ್ಪನವರ, ಪ್ರಾ.ಶಾ.ಶಿಕ್ಷಕರ ಸಂಘದ ಕಾರ್ಯದರ್ಶಿ ಆರ್.ಎಸ್ ಈಳಗೇರ, ಪಿ.ಆರ್ ನವಲೆ ಸೇರಿದಂತೆ ಇಲಾಖೆಯ ಹಲವಾರು ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಟಿ ಮೆಳ್ಳಳ್ಳಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಎಂ ಮಾಳಗಿಮನಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.