ಬುಧವಾರ, ಜೂನ್ 23, 2021
28 °C

‘ಗೊಂದಲ ಬೇಡ, ಸಂಘಟಿತರಾಗಿ ಶ್ರಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಸ್ವೆಹಳ್ಳಿ:- ‘ನಮ್ಮ ನಾಯಕ ಯಾರು, ಯಾರ ಮುಂದಾಳತ್ವದಲ್ಲಿ ಕೆಲಸ ಮಾಡಬೇಕು ಎಂಬ ಗೊಂದಲ ಬೇಡ. ಪಕ್ಷದ ಗೆಲುವಿಗೆ ಎಲ್ಲರೂ ಸಂಘಟಿತರಾಗಿ ಶ್ರಮಿಸೋಣ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾರ್ಯಕರ್ತರಿಗೆ ಕರೆ ನೀಡಿದರು.ಇಲ್ಲಿನ ಹೊಬಳಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರ ಮಾತನಾಡಿದರು.‘ಬಿಜೆಪಿ ಬಿಡುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ನಾನು ಬಿಜೆಪಿಗಾಗಿ  ದುಡಿಯುತ್ತೇನೆ. ಈ ಬಗ್ಗೆ ಯಾವುದೇ ಗೊಂದಲ ಬೇಡ’ ಎಂದರು.ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎ.ಬಿ.ಹನುಮಂತಪ್ಪ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಶೀಲಾ ಗದ್ದಿಗೇಶ್, ಸತ್ತಿಗೆ ಲೋಕೆಶ್, ಶಾಂತರಾಜ್ ಪಾಟೀಲ್, ಹನುಮನಹಳ್ಳಿ ಜಿ.ಎಂ.ರವಿಕುಮಾರ್, ಮಂಜು ಸದಾಶಿವಪುರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.