ಭಾನುವಾರ, ಫೆಬ್ರವರಿ 28, 2021
31 °C
ಹೊನ್ನಾಳಿ: 31 ಗ್ರಾಮ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಆಯ್ಕೆ – ಶಾಸಕ ಡಿ.ಜಿ.ಶಾಂತನಗೌಡ

‘ಗ್ರಾ.ಪಂ.ಚುನಾವಣೆ ಸರ್ಕಾರದ ಪರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಗ್ರಾ.ಪಂ.ಚುನಾವಣೆ ಸರ್ಕಾರದ ಪರ’

ಹೊನ್ನಾಳಿ :  ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ  ಚುನಾವಣೆಯಲ್ಲಿ 45 ಗ್ರಾಮ ಪಂಚಾಯ್ತಿಗಳ ಪೈಕಿ  31 ಪಂಚಾಯ್ತಿಗಳಲ್ಲಿ  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ  ಹಿಡಿಯಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಜನರ ತೀರ್ಪು, ಪಕ್ಷದ ಹಾಗೂ ಸರ್ಕಾರದ ಪರವಾಗಿದೆ. ಇದಕ್ಕೆ ಕಾರಣ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾರದರ್ಶಕ, ದಿಟ್ಟ ಆಡಳಿತ ಮತ್ತು ಸರ್ಕಾರದ ಹಲವಾರು ಸಾಧನೆಗಳು ಎಂದರು.ಈ ಕಾರಣಕ್ಕಾಗಿ ತಾಲ್ಲೂಕಿನ ಪಕ್ಷದ ಅಧ್ಯಕ್ಷರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ಪಕ್ಷದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.ಚುನಾವಣಾ ನೀತಿ ಸಂಹಿತೆ ಯಿಂದಾಗಿ ಸ್ಥಗಿತಗೊಂಡಿದ್ದ ಅನೇಕ ಕಾಮಗಾರಿಗಳನ್ನು ಇಂದಿನಿಂದಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿ ಸಿದ್ದೇನೆ ಎಂದು ಹೇಳಿದರು.  ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಆದ್ದರಿಂದ ರೈತರಿಗೆ ತೊಂದರೆಯಾಗದಂತೆ ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಆಯ್ದ ಸೊಸೈಟಿ ಗಳಲ್ಲಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಖರೀದಿ ಕೇಂದ್ರ ಆರಂಭ: ಎಪಿಎಂಸಿಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅಡಿಯಲ್ಲಿ  ಭತ್ತಕ್ಕೆ  ₨ 1,360 ಗಳಿಗೆ ಖರೀದಿ ಮಾಡಲಾಗುತ್ತಿದೆ ಎಂದರು.ಕಾಂಗ್ರೆಸ್‌ಗೆ ಸೇರ್ಪಡೆ :ತಾಲ್ಲೂಕಿನ ಚಿಕ್ಕಗೋಣಿಗೆರೆ ಗ್ರಾಮ ಪಂಚಾಯ್ತಿಗೆ ಆಯ್ಕೆಯಾದ ಪದ್ಮಲತಾ ಜೈನ್  ಹಾಗೂ ಮುಖಂಡ ನವೀನ್ ಕುಮಾರ್ ಜೈನ್ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದರು.ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಪ್ಪ, ಶಿವ ಬ್ಯಾಂಕಿನ ಅಧ್ಯಕ್ಷ ಸದಾಶಿವಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಆರ್.ನಾಗಪ್ಪ, ಮಾಜಿ ಉಪಾಧ್ಯಕ್ಷ ಕೆ.ವಿ. ಚನ್ನಪ್ಪ,  ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕಾಂತರಾಜ್, ನೂತನ ಗ್ರಾಮ ಪಂಚಾಯ್ತಿ ಸದಸ್ಯರಾದ ಮಾದಪ್ಪ, ಪ್ರಕಾಶ್ ಹಾಗೂ ಮುಖಂಡರಾದ ಮಂಜೇಶ್, ಮೋಹನ್ ಗುಡ್ಡಜ್ಜಿ ಇತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.