ಕಾರ್ಕಳ : ಜಲಾನಯನ ಇಲಾಖೆಯ ಅಧಿಕಾರಿ ತಮ್ಮಷ್ಟಕ್ಕೆ ತಾವೇ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಇಲಾಖೆಯ ಮಾಹಿತಿಯನ್ನು ತಿಳಿಸುವುದಾಗಲಿ, ಜನಪ್ರತಿನಿಧಿಯನ್ನು ಭೇಟಿ ಮಾಡಿ ಚರ್ಚಿಸುವುದಾಗಲಿ ಮಾಡುತ್ತಿಲ್ಲ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಅಭಿವೃದ್ಧಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳು ಆದಷ್ಟು ಶೀಘ್ರ ಮುಗಿಯುವಂತಾಗಬೇಕು. ಎಲ್ಲ ಅಭಿವೃದ್ಧಿ ಕಾಮಗಾರಿ ಟೆಂಡರ್ ಪ್ರಕ್ರಿಯೆ ಫೆಬ್ರವರಿ ೧೫ರ ಒಳಗೆ ಮುಗಿಸಬೇಕು. ಲೋಕಸಭಾ ಚುನಾವಣೆ ಸಮೀಪ ಬರುವುದರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೊಂಡು ನಂತರ ಕಾಮಗಾರಿಗಳು ಸ್ಥಗಿತವಾಗುವಂತೆ ಆಗಬಾರದು ಎಂದು ಮುನ್ನೆಚ್ಚರಿಕೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಜನವರಿ ತಿಂಗಳಲ್ಲಿ ಟೆಂಡರ್ ಕರೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಎಂಜಿನಿಯರ್ಗೆ ಶಾಸಕರು ತಿಳಿಸಿದರು. ನಗರೋತ್ಪನ್ನ ಯೋಜನೆಯಡಿ ಪಟ್ಟಣದ ಮುಖ್ಯರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಸಭೆಯಲ್ಲಿ ದೂರುಗಳು ಕೇಳಿಬಂದವು. ಅದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ಜಾಗದ ಮಾಲೀಕರು ಜಾಗ ಬಿಟ್ಟುಕೊಡದ ಕಾರಣ ವಿಳಂಬವಾಗುತ್ತಿದೆ. ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕಾಗಿದೆ. ಮುಂದಿನ ಎರಡು ದಿನಗಳಲ್ಲಿ ಕಾಮಗಾರಿ ಆರಂಭವಾಗಲಿವೆ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಾಗದ ಮಾಲೀಕರಿಗೆ ನೀಡಲಾಗುವ ಪರಿಹಾರ ಧನವನ್ನು ಬಹಿರಂಗವಾಗಿ ತಿಳಿಸಿಬಿಡಿ ಆಗ ಜಾಗ ಬಿಟ್ಟುಕೊಡುತ್ತಾರೆ ಎಂದರು.

ಪಟ್ಟಣದ ಬಾಹುಬಲಿ ವಿಗ್ರಹದ ಮಹಾಮಸ್ತಕಾಭಿಷೇಕ ಹತ್ತಿರ ಬರುವುದರಿಂದ ವಿಶೆಷ ಸಭೆ ಕರೆಯಲಾಗುವುದು. ಸಭೆಯಲ್ಲಿ ಹೆಚ್ಚಿನ ಅನುದಾನ ಕೋರಿ ಸರ್ಕಾರ ಪ್ರಸ್ತಾವ ಕಳಿಸಬೇಕಾಗಿದೆ ಎಂದರು. ತಾಲ್ಲೂಕಿನಲ್ಲಿ ೧೦ಕ್ಕೂ ಅಧಿಕ ಅಕ್ರಮ ಮದ್ಯ ಮಾರಾಟದ ಅಡ್ಡೆಗಳು ಕಾರ್ಯಾಚರಿಸುತ್ತಿವೆ. ಆರೋಪಿಗಳನ್ನು ಪತ್ತೆ ಹಚ್ಚಲು ತೆರಳುವಾಗ ಮಾಹಿತಿ ಸೋರಿ ವಿಫಲರಾಗುತ್ತಿದ್ದೇವೆ. ಹೆಚ್ಚು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾಗಿದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿ ತಿಳಿಸಿದರು.

ಅಂಡಾರು -ಕಾಡುಹೊಳೆ ರಸ್ತೆ ಉದ್ಘಾಟನೆಗೆ ಮೊದಲೇ ಹಾಳಾಗಿದ್ದು, ತೇಪೆ ಕಾರ್ಯಾಚರಣೆ ನಡೆಯುತ್ತಿದೆ. ನಂದಳಿಕೆ ರಸ್ತೆ ಎರಡು ವರ್ಷಗಳಲ್ಲೇ ದುಸ್ಥಿತಿಗೆ ಬಂದಿದೆ. ಲೋಕಾಯುಕ್ತರಿಗೆ ದೂರು ಸಲ್ಲಿಸುವ ನಿರ್ಧಾರ ಕೈಗೊಳ್ಳೋಣ ಎಂದಾಗ ತಾವೇ ಅದರ ಉಸ್ತುವಾರಿ ನೋಡಿಕೊಂಡು ಸರಿಪಡಿಸುವುದಾಗಿ ಅಧಿಕಾರಿ ತಿಳಿಸಿದರು.

ಸ್ಥಾಯಿ ಸಮಿತಿಯ ಪ್ರವೀಣ ಸಾಲ್ಯಾನ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಮೊಯಿಲಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಶ್ಮಿ ಶೆಟ್ಟಿ, ಉಪಾಧ್ಯಕ್ಷ ಜಯವರ್ಮ ಜೈನ್, ತಹಶೀಲ್ದಾರ್ ಬಾಬು ದೇವಾಡಿಗ, ಜಿಲ್ಲಾ ಪಂಚಾಯಿತಿ ಸದಸ್ಯ ಉದಯ ಎಸ್.ಕೋಟ್ಯಾನ್, ಪುರಸಭಾಧ್ಯಕ್ಷೆ ರೆಹಮತ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.