ಭಾನುವಾರ, ಜೂನ್ 20, 2021
26 °C

‘ಜವಾಬ್ದಾರಿಯಿಂದ ಚುನಾವಣಾ ಕಾರ್ಯ ನಿರ್ವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲೋಕಸಭೆ ಚುನಾವಣೆಗೆ ನಿಯೋಜಿತವಾಗಿರುವ ನೋಡಲ್‌ ಅಧಿಕಾರಿಗಳು ಜವಾಬ್ದಾರಿಯುತವಾಗಿ ಚುನಾವಣಾ ಕಾರ್ಯನಿರ್ವಹಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ  ಶುಕ್ರ ವಾರ ನಡೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು.‘ರಾಜ್ಯದ ಮುಖ್ಯ ಚುನಾವಣಾಧಿ ಕಾರಿಗಳು ನೀಡಿರುವ ಮಾರ್ಗದರ್ಶನ ದಂತೆ ಪ್ರತಿಯೊಬ್ಬ ಅಧಿಕಾರಿಯು ಮುಕ್ತ ಹಾಗೂ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಅವರು ಹೇಳಿದರು.‘ಮತದಾರರು ಮತದಾರರ ಪಟ್ಟಿ ಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.   ಮಾರ್ಚ್ ೧೬ರವರೆಗೆ ಹೆಸರುಗಳನ್ನು

ನೋಂದಾಯಿಸಿಕೊಳ್ಳಲು ಅವಕಾಶವಿದೆ.   ಸಂಬಂಧಪಟ್ಟ ಅಧಿಕಾರಿಗಳು ಮತದಾರ ರಿಗೆ ಈ ಸಂಬಂಧ ಅರಿವು ಮೂಡಿಸ ಬೇಕು’ ಎಂದು ತಿಳಿಸಿದರು.

ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ

ಟೋಲ್ ಫ್ರೀ ಸಂಖ್ಯೆ: ೧೦೭೭   ಕರೆ ಮಾಡಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.